January 11, 2026

ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ: ಪ್ರಹ್ಲಾದ್ ಜೋಷಿ

GridArt_20241026_181530706.jpg

ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ: ಪ್ರಲ್ಹಾದ್ ಜೋಷಿ

ಹಾವೇರಿ ಶಿಗ್ಗಾವಿ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಭಾರತ ಮಾತೆಗೆ ಜೈ ಎಂದರೆ ಜೈಲಿಗೆ ಹಾಕುತ್ತಾರೆ. ಪಾಕಿಸ್ತಾನವನ್ನು ನಾಯಿ ಕುನ್ನಿಯಂತೆ ಕೂಡಿಸಿರುವುದು ಪ್ರಧಾನಿ ನರೇಂದ್ರ ಮೋದಿಯವರು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಹೇಳಿದರು.


ಅವರು ಶಿಗ್ಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ರೋಡ್ ಶೊನಲ್ಲಿ ಪಾಲ್ಗೊಂಡು ಮಾತನಾಡಿದರು. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೊಡ್ಡ ಬದಲಾವಣೆ ಆಗುತ್ತಿದೆ. ನಿಮ್ಮ ಬೆಳೆಗಳಿಗೆ ಬೆಲೆ ಹೆಚ್ಚಿಸುವ ಕೆಲಸ ಮಾಡಿದ್ದೇನೆ. ಗೊಬ್ಬರಕ್ಕೆ ಸಬ್ಸಿಡಿ ಕೊಡುತ್ತಿದ್ದೇವೆ. ರೈತರ ಬೆಳೆಗಳಿಗೆ ಎಂಎಸ್ ಪಿ ನೀಡುತ್ತಿದ್ದೇವೆ. ರಸ್ತೆ ಮಾಡುವ ಕೆಲಸ ಮಾಡಿದ್ದೇವೆ‌ . ಈ ಕ್ಷೇತ್ರದಲ್ಲಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ವರದಾ ನದಿ ನೀರನ್ನು ನಿಮ್ಮ ಹೊಲಗಳಿಗೆ ಹರಿಸುವ ಭಗಿರಥನ ಕೆಲಸವನ್ನು ಯಾರಾದರೂ ಮಾಡಿದ್ದರೆ ಅದು ಬಸವರಾಜ ಬೊಮ್ಮಾಯಿ ಎಂದರು.


ಕ್ಷೇತ್ರದಲ್ಲಿ 18 ಸಾವಿರ ಮನೆಗಳು, ಕಾಂಕ್ರಿಟ್ ರಸ್ತೆ, ಮಾಡಿದ್ದಾರೆ. ಈ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮುಂದುವರೆಸಬೇಕೆಂದರೆ ಭರತ್ ಬೊಮ್ಮಾಯಿಗೆ ಬೆಂಬಲಿಸಬೇಕು.ಕಾಂಗ್ರೆಸ್ ನವರು ಗ್ಯಾರೆಂಟಿ ಕೊಡುತ್ತೇನೆ ಎಂದು ಜನರಿಗೆ ಮೋಸ ಮಾಡುತ್ತಿದ್ದಾರೆ‌. ಜನರಿಗೆ ನಾವು ಐದು ಕೆಜಿ ಅಕ್ಕಿ ಕೊಡುತ್ತೇವೆ ಎಂದರೆ ಇವರು ದುಡ್ಡು ಇಲ್ಲ ಎಂದರು. ಗೃಹ ಲಕ್ಷ್ಮೀ ಹಣ ಬರುತ್ತಿಲ್ಲ. ಯಡಿಯೂರಪ್ಪ ಅವರ ಭಾಗ್ಯಲಕ್ಷ್ಮೀ ಹಣ ಬರುತ್ತಿಲ್ಲ‌. ಆದರೆ, ಇವರು ಮುಡಾದಲ್ಲಿ 14 ಸೈಟು ಹೊಡೆದಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಹಣ ಲೂಟಿ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸನ್ನು ಸೋಲಿಸಬೇಕು ಎಂದು ಹೇಳಿದರು.

ವರದಿ : ನಿಂಗರಾಜ್ ಕುಡಲ್ ಹಾವೇರಿ ಜಿಲ್ಲೆ ಬಂಕಾಪುರ್

About The Author

Leave a Reply

Your email address will not be published. Required fields are marked *