ಆಂಬುಲೆನ್ಸ್ ಡಿಕ್ಕಿಯಾಗಿ ಸೊನಲೆಯ ಪ್ರವೀಣ್ ಸಾವು | ವರ್ಷದ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಅನಾಥಳಾದ ತಾಯಿ
ಆಂಬುಲೆನ್ಸ್ ಡಿಕ್ಕಿಯಾಗಿ ಹೊಸನಗರ ಮೂಲದ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿಲುವಾಗಿಲು ಬಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೊನಲೆ ಗ್ರಾಮದ ಪ್ರವೀಣ್ (30) ಎಂದು ಗುರುತಿಸಲಾಗಿದೆ.
ನಿಲುವಾಗಿಲು ಬಳಿಯಲ್ಲಿ ಬೈಕ್ ಹಾಗೂ ಆಂಬುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಪ್ರವೀಣ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸೇರಿದ ಆಂಬುಲೆನ್ಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತಿದ್ದ ಪ್ರವೀಣ್ ಹಲವು ವರ್ಷಗಳ ಹಿಂದೆಯೇ ತಂದೆಯನ್ನು ಕಳೆದುಕೊಂಡಿದ್ದು ತಾಯಿ ಕಲ್ಪನಾ ಮತ್ತು ತಂಗಿ ಸೌಮ್ಯ ಜೊತೆ ವಾಸವಿದ್ದನು, ಆದರೆ ಕಳೆದ ವರ್ಷ ಆತನ ತಂಗಿ ಸೌಮ್ಯ ಹೆರಿಗೆ ಸಂಧರ್ಭದಲ್ಲಿ ತೀರಿಕೊಂಡ ನಂತರ ಬೆಂಗಳೂರಿನ ಖಾಸಗಿ ಕಂಪನಿಯ ಕೆಲಸ ಬಿಟ್ಟು ಸೊನಲೆಯಲ್ಲಿ ತಾಯಿಯೊಂದಿಗೆ ಇದ್ದು ತಮ್ಮ ಜಮೀನನ್ನು ನೋಡಿಕೊಂಡಿದ್ದನು.
ಈಗಾಗಲೇ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಕಲ್ಪನಾ ರವರು ಕಳೆದ ವರ್ಷ ತನ್ನ ಮಗಳನ್ನು ಕಳೆದುಕೊಂಡಿದ್ದು , ಈಗ ಮಗನನ್ನು ಕಳೆದುಕೊಂಡು ಅನಾಥವಾಗಿದ್ದಾರೆ!
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…