POSTMANNEWS

ನೈಜ ಸುದ್ದಿ ನೇರ ಬಿತ್ತರ..

ತಟ್ಟೆ ಎಸೆತ ಸ್ಪರ್ಧೆಯಲ್ಲಿ ಚಿಕ್ಕಜೇನಿ ಸರ್ಕಾರಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

ತಟ್ಟೆ ಎಸೆತ ಸ್ಪರ್ಧೆಯಲ್ಲಿ ಚಿಕ್ಕಜೇನಿ ಸರ್ಕಾರಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಚಿಕ್ಕಜೇನಿ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಸುಮಂತ ಎಲ್. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಬುಧವಾರ ಶಿವಮೊಗ್ಗದ ನೆಹರೂ ಕ್ರೀಡಾಂಗಣ ದಲ್ಲಿ ನಡೆದ  17 ವರ್ಷದೊಳಗಿನ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ   ಕ್ರೀಡಾ ಕೂಟದ ಬಾಲಕರ ತಟ್ಟೆ ಎಸೆತ ಸ್ಪರ್ಧೆಯಲ್ಲಿ ಈತ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.

ವಿಜೇತ ವಿದ್ಯಾರ್ಥಿ ಮತ್ತು ಕ್ರೀಡಾ ತರಬೇತಿ ನೀಡಿದ ದೈಹಿಕ ಶಿಕ್ಷಕಿ ಲತಾ ಬಿ.ಟಿ. ಯವರನ್ನು ಚಿಕ್ಕಜೇನಿ ಗ್ರಾ.ಪಂ. ಅಧ್ಯಕ್ಷ  ಎನ್.ಪಿ.ರಾಜು, ಶಾಲಾ ಎಸ್ ಡಿ.ಎಂ.ಸಿ.ಅಧ್ಯಕ್ಷ ಪ್ರಕಾಶ , ಹೊಸನಗರ ತಾಲೂಕು ಬಿ.ಇ.ಓ ಕೃಷ್ಣಮೂರ್ತಿ ಹಾಗೂ ಮುಖ್ಯೋಪಾಧ್ಯಾಯ ಶಿವಾಜಿ ಟಿ.ಎಂ.ಅಭಿನಂದಿಸಿದ್ದಾರೆ.

About The Author

Leave a Reply

Your email address will not be published. Required fields are marked *