ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ
ರಿಪ್ಪನ್‌ಪೇಟೆ : ಹುಬ್ಬಳ್ಳಿಯಲ್ಲಿ 2022ರಲ್ಲಿ ಪೊಲೀಸ್ ಠಾಣೆ ಮೇಲೆ ನಡೆದ ದಾಳಿ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಹಿಂಪಡೆದಿರುವ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರದ ಕ್ರಮಕ್ಕೆ ಮಾಜಿ ಗೃಹ ಸಚಿವ ಹಾಗೂ ಹಾಲಿ ಶಾಸಕರಾದ ಅರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಅಂದಿನ ಘಟನೆಯಲ್ಲಿ ಹಲವು ಪೋಲಿಸ ಸಿಬ್ಬಂದಿಗಳ ಪ್ರಾಣಕ್ಕೆ ಕುತ್ತು ಬಂದಿತ್ತು, ಘಟನೆಯಲ್ಲಿ ಭಾಗವಹಿಸಿದ್ದ 160 ಜನರನ್ನು ಬಂಧಿಸಲಾಗಿತ್ತು ಈಗ ಅವರಿಗೆ ಅಮಾಯಕರ ಪಟ್ಟ ಕಟ್ಟಿ ಪ್ರಕರಣ ಹಿಂಪಡೆದಿರುವ ಸರಕಾರದ ಕ್ರಮ ಕಾನೂನು ಬಾಹಿರವಾಗಿದೆ ಎಂದಿದ್ದಾರೆ.
ಒಂದು ಕೋಮಿನ ಮತಕ್ಕಾಗಿ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಖಂಡನೀಯ ಇದು ಗಲಭೆಕೋರರಿಗೆ ಪುಷ್ಟಿ ನೀಡಿದಂತಾಗುತ್ತದೆ. ಕೂಡಲೇ ಸರಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು, ಗಲಭೆಕೋರರಿಗೆ ಶಿಕ್ಷೆ ಆಗಬೇಕೆಂದು ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಕೋವೀಡ್ ಹಗರಣವನ್ನು ತನಿಖೆ ಮಾಡಲು ಮುಂದಾಗಿರುವ ಸರ್ಕಾರದ ಕ್ರಮ ಕೇವಲ ಜನರ ದಿಕ್ಕು ತಪ್ಪಿಸುವ ಕೆಲಸವಾಗಿದ್ದು ವಾಲ್ಮಿಕೀ ಹಗರಣ ಹಾಗೂ ಮುಡಾ ಹಗರಣದಿಂದಾಗಿರುವ ಸರ್ಕಾರಕ್ಕಾಗಿರುವ ಡ್ಯಾಮೇಜ್ ನ್ನು ಮುಚ್ವಿಕೊಳ್ಳುವ ಪ್ರಯತ್ನವಾಗಿದೆ ಎಂದರು.
ಈ ಸಂಧರ್ಭದಲ್ಲಿ ರಿಪ್ಪನ್‌ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸತೀಶ್ ಎನ್ , ಪ್ರಧಾನ ಕಾರ್ಯದರ್ಶಿ ಸುಂದರೇಶ್ ಕೆರೆಹಳ್ಳಿ ಮುಖಂಡರಾದ ಆರ್ ಟಿ ಗೋಪಾಲ್ , ಆನಂದ್ ಮೆಣಸೆ , ಕಗ್ಗಲಿ ಲಿಂಗಪ್ಪ ,ಎನ್ ಟಿ ನಾಗರತ್ನ , ಲೀಲಾ ಶಂಕರ್ , ಮಲ್ಲಿಕಾರ್ಜುನ್ , ಆರ್ ರಾಘವೇಂದ್ರ , ನಾಗರತ್ನ ದೇವರಾಜ್ ಹಾಗೂ ಇನ್ನಿತರರಿದ್ದರು.
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…
ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…