Headlines

ಮೆಗ್ಗಾನ್ ಆಸ್ಪತ್ರೆಯಲ್ಲಿ ಉಪ್ಪಿನ ಕೊರತೆ.! – ವಿಷ ಸೇವಿಸಿದ್ದ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗದೇ ಸಾವು | ಕುಟುಂಬಸ್ಥರ ಆಕ್ರೋಶ

ಮೆಗ್ಗಾನ್ ಆಸ್ಪತ್ರೆಯಲ್ಲಿ ಉಪ್ಪಿನ ಕೊರತೆ – ವಿಷ ಸೇವಿಸಿದ್ದ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗದೇ ಸಾವು | ಕುಟುಂಬಸ್ಥರ ಆಕ್ರೋಶ

ಶಿವಮೊಗ್ಗ : ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಉಪ್ಪಿನ ಕೊರತೆಯಿಂದ ವಿಷ ಸೇವಿಸಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಸ್ವಾಮಿನಾಥ್ (55) ಎಂಬಾತನನ್ನು ಭದ್ರಾವತಿಯಿಂದ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವಿಷ ಸೇವಿಸಿ ಒದ್ದಾಡುತ್ತಿದ್ದ ವ್ಯಕ್ತಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲು ವೈದ್ಯರು ಮತ್ತು ಸಿಬ್ಬಂದಿ ವಿಫಲರಾಗಿದ್ದು ಆಸ್ಪತ್ರೆಗೆ ದಾಖಲಿಸಿ ಒಂದು ಗಂಟೆ ಆದರೂ ಯಾವುದೇ ಸಿಬ್ಬಂದಿ ಮತ್ತು ವೈದ್ಯರು ವ್ಯಕ್ತಿಗೆ ಚಿಕಿತ್ಸೆ ನೀಡದ ಪರಿಣಾಮ ರೋಗಿಯ ಜೀವ ಹೋಗಿದೆ.

ವಿಷಸೇವಿಸಿದ ಕೇಸ್ ಬಂದ ತಕ್ಷಣ ಕೂಡಲೇ ಅವರಿಗೆ ವಾಂತಿ ಮಾಡಿಸಬೇಕು. ಆದರೆ ವಾಂತಿ ಮಾಡಿಸಲು ಆಸ್ಪತ್ರೆಯಲ್ಲಿ ಉಪ್ಪು ಖಾಲಿ ಆಗಿದ್ದು, ಉಪ್ಪು ಇಲ್ಲದೇ ಸಿಬ್ಬಂದಿಗಳು ಪರದಾಡಿದ್ದಾರೆ. ಇನ್ನು ಉಪ್ಪು ತರಲು ಒಂದು ಗಂಟೆ ವಿಳಂಬ ಮಾಡಿದ್ದಾರೆ. ಅಷ್ಟರಲ್ಲೇ ವಿಷಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಯ ಜೀವ ಹೋಗಿತ್ತು. ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲು ವೈದ್ಯರು ಮತ್ತು ಸಿಬ್ಬಂದಿಗಳು ಇರದ ಹಿನ್ನಲೆಯಲ್ಲಿ ವ್ಯಕ್ತಿಯ ಜೀವ ಹೋಗಿದೆ ಎನ್ನುವುದು ಮೃತನ ಕುಟುಂಬಸ್ಥರ ಆರೋಪವಾಗಿದೆ. ಸ್ವಾಮಿನಾಥ್ ನ ಸಾವಿಗೆ ವೈದ್ಯರು ಮತ್ತು ಜಿಲ್ಲಾಸ್ಪತ್ರೆಯ ಬೇಜವಾಬ್ದಾರಿಯೇ ಕಾರಣವಾಗಿದೆ. ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಮೃತನ ಕುಟುಂಬಸ್ಥರು ಮತ್ತು ಸಂಬಂಧಿಕರು ಕಣ್ಣೀರು ಹಾಕುತ್ತಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಈ ಅವ್ಯವಸ್ಥೆ ನೋಡಿದ ಮೃತನ ಕುಟುಂಬಸ್ಥರಿಗೆ ದೊಡ್ಡ ಆಘಾತವಾಗಿದೆ. ಆಸ್ಪತ್ರೆಯಲ್ಲಿ ಎಲ್ಲದಕ್ಕೂ ಹಣ ಕೇಳುತ್ತಾರೆ. ಸರಕಾರಿ ಆಸ್ಪತ್ರೆಯಲ್ಲಿ ಲಂಚ ಕೊಡದೇ ಇದ್ದರೇ ಯಾವುದೇ ಕೆಲಸ ಆಗುವುದಿಲ್ಲ. ಮೃತ ವ್ಯಕ್ತಿಯ ದೇಹವನ್ನು ಶವಾಗಾರಕ್ಕೆ ಶಿಫ್ಟ್ ಮಾಡಲು ಸರಕಾರಿ ಅಂಬುಲೇನ್ಸ್ ಚಾಲಕ 300 ರೂಪಾಯಿ ಪಡೆದಿದ್ದಾನಂತೆ. ಮೃತ ಪಟ್ಟ ಬಳಿಕವೂ ಮೃತನ ಸಂಬಂಧಿಗಳು ದುಡ್ಡು ಕೊಟ್ಟು ಮುಂದಿನ ಕೆಲಸ ಮಾಡಿಕೊಂಡಿದ್ದಾರೆ. ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಹಣ ಕೊಟ್ಟರೇ ಮಾತ್ರ ಚಿಕಿತ್ಸೆ ಮತ್ತು ಸೌಲಭ್ಯಗಳು ಸಿಗಲು ಸಾಧ್ಯ. ಸರಕಾರಿ ಆಸ್ಪತ್ರೆಗೆ ಬಡರೋಗಿಗಳು ಬಂದರೆ ಅವರನ್ನು ದೇವರೇ ಕಾಪಡುವಂತ ಸ್ಥಿತಿ ನಿರ್ಮಾಣವಾಗಿದೆ.

ತುರ್ತು ಚಿಕಿತ್ಸಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ಮತ್ತು ಸಿಬ್ಬಂದಿಗಳ ವಿರುದ್ಧ ವೈದ್ಯಾಧಿಕಾರಿಗಳು ಕ್ರಮ ವಹಿಸಬೇಕಿದೆ. ಸ್ವಾಮಿನಾಥ್ಗೆ ಸೂಕ್ತ ಸಮಯದಲ್ಲಿ ಯಾಕೇ ಚಿಕಿತ್ಸೆ ಕೊಟ್ಟಿಲ್ಲ. ಆತನ ಸಾವಿಗೆ ಯಾರು ಕಾರಣ ಎನ್ನುವ ಕುರಿತು ಸೂಕ್ತ ತನಿಖೆಯಾಗಬೇಕೆಂದು ಮೃತನ ಕುಟುಂಬಸ್ಥರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

Exit mobile version