ಮನೆ ಹಿತ್ತಲ್ಲಿನಲ್ಲಿ ಹೂತಿಟ್ಟಿದ್ದ ಕೆ.ಜಿ ಗಟ್ಟಲೆ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು

ಮನೆ ಹಿತ್ತಲ್ಲಿನಲ್ಲಿ ಹೂತಿಟ್ಟಿದ್ದ ಕೆ.ಜಿ ಗಟ್ಟಲೆ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು

ತೀರ್ಥಹಳ್ಳಿ : ಹಲವಾರು ಅಪರಾಧಗಳಲ್ಲಿ ಭಾಗಿಯಾಗಿ ಬೆಂಗಳೂರಿನಲ್ಲಿ ಚಿನ್ನವನ್ನು ಕದ್ದು ತೀರ್ಥಹಳ್ಳಿಯ ತನ್ನ ಮನೆಯ ಹಿಂದೆ ಹೂತಿಟ್ಟಿದ್ದ ಆರೋಪಿಯನ್ನು ಮಾಗಡಿ ಪೊಲೀಸರು ತೀರ್ಥಹಳ್ಳಿಗೆ ಕರೆ ತಂದು ಕೆಜಿ ಗಟ್ಟಲೆ ಚಿನ್ನವನ್ನು ವಶಪಡಿಸಿಕೊಂಡಿರುವ ಘಟನೆ  ನಡೆದಿದೆ.

ಹಮೀದ್ ಹಂಜ ಎಂಬ ಆರೋಪಿ ಬೆಂಗಳೂರಿನ ಮಾಗಡಿಯಲ್ಲಿ ಕಳ್ಳತನ ಮಾಡಿ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ತಮ್ಮ ಮನೆಯ ಹಿತ್ತಲಿನಲ್ಲಿ ತಂದು ಹೂತಿಟ್ಟಿದ್ದ.

ಬೆಂಗಳೂರಿನಿಂದ ತೀರ್ಥಹಳ್ಳಿಗೆ ಆರೋಪಿಯನ್ನು ಕರೆ ತಂದಿದ್ದ ಮಾಗಡಿ ಪೊಲೀಸರು ಸುಮಾರು 1 ಕೆಜಿಗೂ ಜಾಸ್ತಿ ಆಗುವಷ್ಟು ಚಿನ್ನವನ್ನು ವಶ ಪಡಿಸಿಕೊಂಡಿದ್ದಾರೆ.

ಮೂಲತಃ ಆಗುಂಬೆ ಸಮೀಪದ ಗುಡ್ಡೇಕೇರಿಯವನಾದ ಹಂಜನ ಮೇಲೆ 70 ರಿಂದ 80 ಕ್ಕೂ ಹೆಚ್ಚು ಕೇಸ್ ಗಳಿದ್ದು ಆಗುಂಬೆ ಸಮೀಪದಲ್ಲಿ ನಡೆದಿದ್ದ ಹೊಸಳ್ಳಿ ವೆಂಕಟೇಶ್ ಕೊಲೆ ಪ್ರಕರಣದಲ್ಲೂ ಹಂಜ ಭಾಗಿಯಾಗಿದ್ದ.ಕೊಲೆ, ವಸೂಲಿ, ವಂಚನೆ ಪ್ರಕರಣಗಳಲ್ಲಿ ಈತ ಭಾಗಿಯಾಗಿರುವುದು ತಿಳಿದು ಬಂದಿದೆ.

Leave a Reply

Your email address will not be published. Required fields are marked *