ಮನೆ ಹಿತ್ತಲ್ಲಿನಲ್ಲಿ ಹೂತಿಟ್ಟಿದ್ದ ಕೆ.ಜಿ ಗಟ್ಟಲೆ ಚಿನ್ನವನ್ನು ವಶಕ್ಕೆ ಪಡೆದ ಪೊಲೀಸರು
ತೀರ್ಥಹಳ್ಳಿ : ಹಲವಾರು ಅಪರಾಧಗಳಲ್ಲಿ ಭಾಗಿಯಾಗಿ ಬೆಂಗಳೂರಿನಲ್ಲಿ ಚಿನ್ನವನ್ನು ಕದ್ದು ತೀರ್ಥಹಳ್ಳಿಯ ತನ್ನ ಮನೆಯ ಹಿಂದೆ ಹೂತಿಟ್ಟಿದ್ದ ಆರೋಪಿಯನ್ನು ಮಾಗಡಿ ಪೊಲೀಸರು ತೀರ್ಥಹಳ್ಳಿಗೆ ಕರೆ ತಂದು ಕೆಜಿ ಗಟ್ಟಲೆ ಚಿನ್ನವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಹಮೀದ್ ಹಂಜ ಎಂಬ ಆರೋಪಿ ಬೆಂಗಳೂರಿನ ಮಾಗಡಿಯಲ್ಲಿ ಕಳ್ಳತನ ಮಾಡಿ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ತಮ್ಮ ಮನೆಯ ಹಿತ್ತಲಿನಲ್ಲಿ ತಂದು ಹೂತಿಟ್ಟಿದ್ದ.
ಬೆಂಗಳೂರಿನಿಂದ ತೀರ್ಥಹಳ್ಳಿಗೆ ಆರೋಪಿಯನ್ನು ಕರೆ ತಂದಿದ್ದ ಮಾಗಡಿ ಪೊಲೀಸರು ಸುಮಾರು 1 ಕೆಜಿಗೂ ಜಾಸ್ತಿ ಆಗುವಷ್ಟು ಚಿನ್ನವನ್ನು ವಶ ಪಡಿಸಿಕೊಂಡಿದ್ದಾರೆ.
ಮೂಲತಃ ಆಗುಂಬೆ ಸಮೀಪದ ಗುಡ್ಡೇಕೇರಿಯವನಾದ ಹಂಜನ ಮೇಲೆ 70 ರಿಂದ 80 ಕ್ಕೂ ಹೆಚ್ಚು ಕೇಸ್ ಗಳಿದ್ದು ಆಗುಂಬೆ ಸಮೀಪದಲ್ಲಿ ನಡೆದಿದ್ದ ಹೊಸಳ್ಳಿ ವೆಂಕಟೇಶ್ ಕೊಲೆ ಪ್ರಕರಣದಲ್ಲೂ ಹಂಜ ಭಾಗಿಯಾಗಿದ್ದ.ಕೊಲೆ, ವಸೂಲಿ, ವಂಚನೆ ಪ್ರಕರಣಗಳಲ್ಲಿ ಈತ ಭಾಗಿಯಾಗಿರುವುದು ತಿಳಿದು ಬಂದಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…