ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ


ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ಸರ್ವೆ ನಂಬರ್ 47 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 1 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಲಾಯಿತು.
ಬಿದರಹಳ್ಳಿ ಗ್ರಾಮದ ಪ್ರದೀಪ್ ಎಂಬುವವರು ಸರ್ವೆ ನಂ 47 ರಲ್ಲಿ ಸುಮಾರು ಒಂದು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ಅಡಿಕೆ ಸಸಿಗಳನ್ನು ನೆಡಲು ತಯಾರಿ ನಡೆಸಿದ್ದರು.
ಇಂದು ಹುಂಚ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್ ರವರ ನೇತೃತ್ವದಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಅಕ್ರಮವಾಗಿ ಒತ್ತುವರಿ ಮಾಡಿದ್ದ ಸರ್ಕಾರಿ ಜಮೀನನ್ನು ತೆರವುಗೊಳಿಸಿದ್ದಾರೆ.
ಈ ಸಂಧರ್ಭದಲ್ಲಿ ಪಿಎಸ್‌ಐ ಪ್ರವೀಣ್ ಎಸ್ ಪಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ,ಗ್ರಾಮಲೆಕ್ಕಿಗ ಶ್ರೀವಲ್ಲಿ , ಗ್ರಾಮ ಸೇವಕರಾದ ರಾಘು ,ಗಣೇಶ್ ,ದರ್ಶನ್ ಹಾಗೂ ಇನ್ನಿತರರಿದ್ದರು.
