Categories: Blog

ವಾಲಿಬಾಲ್ ತರಬೇತಿ ನೀಡುತಿದ್ದ ಶಿಕ್ಷಕ ಹೃದಯಾಘಾತದಿಂದ ಕುಸಿದು ಬಿದ್ದು ಸಾವು

ವಾಲಿಬಾಲ್ ತರಬೇತಿ ನೀಡುತಿದ್ದ ಶಿಕ್ಷಕ ಹೃದಯಾಘಾತದಿಂದ ಕುಸಿದು ಬಿದ್ದು ಸಾವು

ಶಾಲಾವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ಶಿಕ್ಷಕರೊಬ್ಬರು ಕುಸಿದು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಅ.16ರ ಬುಧವಾರ ನಡೆದಿದೆ.

ಸಾಗರದ ಪ್ರಗತಿ ಸಂಯುಕ್ತ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಗಜಾನನ ಹಿರೇಮಠ (50) ನಿಧನ ಹೊಂದಿದವರು.ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

ಶಿಕ್ಷಕ ಗಜಾನನ ಅವರು ತಮ್ಮ ಕ್ರಿಯಾಶೀಲತೆಯಿಂದ ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆ, ಪೋಷಕರೊಂದಿಗೆ ಅತ್ಯುತ್ತಮ ಸಂಬಂಧ ಹೊಂದಿಕೊಂಡು ಜನಪ್ರಿಯರಾಗಿದ್ದರು. ಅವರು ಕಲಾ ಶಿಕ್ಷಕರಾಗಿ ಕೆಲಸಕ್ಕೆ ಸೇರಿದ್ದು, ಬಳಿಕ ಶಿಕ್ಷಣ ಸಂಸ್ಥೆಯ ಕೋ ಆರ್ಡಿನೇಟರ್ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.

ಕ್ರೀಡಾಸ್ಪರ್ಧೆಗಳಲ್ಲಿ ಪಾಲ್ಗೊಂಡ ಶಾಲೆಯ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದರು. ಅ.16ರ ಬುಧವಾರ ಗಜಾನನ ಅವರು ಶಾಲಾವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆಯಿತಾದರೂ ಮಾರ್ಗ ಮಧ್ಯದಲ್ಲಿ ಅವರು ಅಸುನೀಗಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival…

17 hours ago

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು Bhadravathi police dramatically…

1 day ago

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ A container lorry allegedly driven recklessly under…

1 day ago

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ A physical education teacher…

2 days ago

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು A tragic tipper-bike…

2 days ago

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500…

2 days ago