January 11, 2026

ತೀರ್ಥಹಳ್ಳಿಯ ತಹಶೀಲ್ದಾರ್ ಹೃದಯಘಾತದಿಂದ ನಿಧನ!

ತೀರ್ಥಹಳ್ಳಿಯ ತಹಶೀಲ್ದಾರ್ ಹೃದಯಘಾತದಿಂದ ನಿಧನ!

ತೀರ್ಥಹಳ್ಳಿ : ತಾಲೂಕು ದಂಡಾಧಿಕಾರಿಗಳಾದ ಜಕ್ಕಣ್ಣ ಗೌಡರ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಇವರು ನ್ಯಾಯಾಲಯದ ಕೆಲಸದ ನಿಮಿತ್ತವಾಗಿ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನ ನರ್ತಕಿ ಚಿತ್ರಮಂದಿರ ಎದುರು ಇರುವ ವೈಭವ ಲಾಡ್ಜ್ ನಲ್ಲಿ ತಂಗಿದ್ದರು. ಬುಧವಾರ ರಾತ್ರಿ 10 ಗಂಟೆಯ ಸಮಯದಲ್ಲಿ ತೀವ್ರ ತರದ ಎದೆ ನೋವು ಕಂಡು ಬಂದಿದ್ದು ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು, ಹೈಕೋರ್ಟ್ ಕೆಲಸದ ನಿಮಿತ್ತ ಮಂಗಳವಾರ ಬೆಂಗಳೂರಿಗೆ ತೆರಳಿದ್ದರು. ಫೋನ್ ಸಂಪರ್ಕಕ್ಕೆ ಸಿಗದ ಹಿನ್ನಲೆಯಲ್ಲಿ ನೌಕರರು ಸಂಪರ್ಕ ಸಾಧಿಸುವ ಪ್ರಯತ್ನ ನಡೆಸಿದ್ದಾರೆ.

ಹೃದಯಾಘಾತದಿಂದ ನಿಧನ ಆಗಿರಬಹುದು ಎಂದು ಹೇಳಲಾಗುತ್ತಿದೆ. ಈಗಾಗಲೇ ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದಿದ್ದಾರೆ. ಮೃತಪಟ್ಟಿರುವ ವಿಷಯವನ್ನು ಶಿವಮೊಗ್ಗ ಜಿಲ್ಲಾಧಿಕಾರಿಗಳು ದೃಡಪಡಿಸಿದ್ದಾರೆ.

ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಮತ್ತು ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ತೀರ್ಥಹಳ್ಳಿ ಅಧಿಕಾರಿಗಳು, ತಹಸೀಲ್ದಾರ್ ಕಚೇರಿ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.

About The Author

Leave a Reply

Your email address will not be published. Required fields are marked *