


ಉಡುಪಿ ಮೂಲದ ವ್ಯಕ್ತಿ ಖಾಸಗಿ ಲಾಡ್ಜ್ ನಲ್ಲಿ ನೇಣಿಗೆ ಶರಣು
ತೀರ್ಥಹಳ್ಳಿ : ವ್ಯವಹಾರದಲ್ಲಿ ನಷ್ಟ ಸಂಭವಿಸಿದ ಕಾರಣದಿಂದ ಮನನೊಂದು ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ತೀರ್ಥಹಳ್ಳಿಯ ಖಾಸಗಿ ಹೋಟೆಲ್ ವೊಂದರಲ್ಲಿ ಶುಕ್ರವಾರ(ಅ.11) ರಂದು ನಡೆದಿದೆ.
ಪಟ್ಟಣದ ಬಾಳೆಬೈಲಿನಲ್ಲಿರುವ ಖಾಸಗಿ ಹೋಟೆಲ್ (ಲಾಡ್ಜ್ ) ವೊಂದರಲ್ಲಿ ಎರಡು ದಿನದಿಂದ ರೂಮ್ ಬಾಡಿಗೆ ಪಡೆದಿದ್ದ ಉಡುಪಿ ಮೂಲದ ಪ್ರಸನ್ನ ಶೆಟ್ಟಿ ( 45) ಎಂಬ ವ್ಯಕ್ತಿ ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಕಾರಣ ರೂಮ್ ನಲ್ಲೆ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿದೆ.
ಬುಧವಾರ ಮಧ್ಯಾಹ್ನದಿಂದ ರೂಮ್ ನಿಂದ ಹೊರ ಬಾರದ ಕಾರಣ ಅನುಮಾನದಿಂದ ಇಂದು ಬೆಳಗ್ಗೆ ಬಾಗಿಲು ತೆರೆದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.