POSTMANNEWS

ನೈಜ ಸುದ್ದಿ ನೇರ ಬಿತ್ತರ..

ಜಿಲ್ಲಾ ಯುವ ಸಂಸತ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸ್ಪೂರ್ತಿ

ಜಿಲ್ಲಾ ಯುವ ಸಂಸತ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸ್ಪೂರ್ತಿ

ಶಿವಮೊಗ್ಗ ಮಹಾನಗರ ಪಾಲಿಕೆಯ ಪರಿಷತ್ ಸಭಾಭವನದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಸ್ಪೂರ್ತಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಹೊಸನಗರ ತಾಲೂಕು ಜೇನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಸಗಲ್ಲಿ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕೆ.ಎನ್. ಸ್ಫೂರ್ತಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ.

ಕು|| ಸ್ಫೂರ್ತಿ ನಾಗರಾಜ ಮತ್ತು ನಾಗರತ್ನ ದಂಪತಿಗಳ ಪುತ್ರಿಯಾಗಿದ್ದು ಈಕೆಯ ಅಪ್ರತಿಮ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಆರ್ ಕೃಷ್ಣಮೂರ್ತಿ, ಶಿಕ್ಷಣ ಸಮನ್ವಯಾಧಿಕಾರಿ ಎಂ ರಂಗನಾಥ್, ಶಾಲೆಯ ಮುಖ್ಯ ಶಿಕ್ಷಕ ಬಿ.ಎನ್‌‌ ಪರಶುರಾಮಪ್ಪ, ಶಾಲಾ ಶಿಕ್ಷಕ ವೃಂದ, ಪೋಷಕರು, ಶಾಲಾ ಅಭಿವೃದ್ಧಿ ಸಮಿತಿಯವರು ಹಾಗೂ ಗ್ರಾಮಸ್ಥರು ಶುಭ ಹಾರೈಸಿ ಅಭಿನಂದಿಸಿದ್ದಾರೆ‌.

About The Author

Leave a Reply

Your email address will not be published. Required fields are marked *