ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ದಂಪತಿ ಸಾವು
ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ.
ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕುಪಿರೆ ಗ್ರಾಮದ ಆದರ್ಶ ಯುವರಾಜ ಪಾಂಡವ (27) ಈತನು ಫೋರ್ಡ್ ಕಾರ ಅನ್ನು ತೆಗೆದುಕೊಂಡು, ಮಂಗಸೂಳಿ- ಐನಾಪೂರ ರಸ್ತೆಯಲ್ಲಿ ಪ್ರಯಾಣಿಸುವಾಗ ರಸ್ತೆ ತಿರುವಿನಲ್ಲಿ ಕಾರಿನ ನಿಯಂತ್ರಣ ತಪ್ಪಿ ಪಕ್ಕದ ಹಳ್ಳಕ್ಕೆ ಮುಗುಚಿ ಬಿದ್ದಿದೆ.
ಸ್ಥಳದಲ್ಲಿಯೇ ಆದರ್ಶ(25) ಮತ್ತು ಆತನ ಪತ್ನಿ ಶಿವಾನಿ ಆದರ್ಶ ಪಾಂಡವ (20) ಮೃತಪಟ್ಟಿದ್ದಾರೆ.
ಕಾರಿನಲ್ಲಿ ಒಟ್ಟು ಮಕ್ಕಳು ಸೇರಿ ಏಳು ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದು ರೂಪಾಲಿ ಗಾಡೇಕರ್, ಕುನಾಲ್ ಗಾಡೇಕರ, ರಾಜವೀರ ಪಾಂಡವ, ಅನವಿ ಪಾಂಡವ, ಪೂಜಾ ಬಾಮನೆ ಇವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…
ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…
ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…