ಪರೋಪಕಾರದ ಆಶಯದ ನಡುವೆ ದುರಂತ ಅಂತ್ಯ ಕಂಡ ಎರಡು ವರ್ಷದ ಮಗು – ಮಲೆನಾಡಲ್ಲೊಂದು ಮನಕಲುಕುವ ಘಟನೆ.!
ಹೊಸನಗರ : ಬದುಕಿ ಬಾಳಬೇಕಿದ್ದ ಪುಟ್ಟ ಕಂದಮನೊಬ್ಬ ತನ್ನದಲ್ಲದ ತಪ್ಪಿಗೆ ದುರಂತ ಅಂತ್ಯ ಕಂಡ ಕರುಳು ಹಿಂಡುವ ಘಟನೆ ನಡೆದಿದೆ.
ಹೊಸನಗರ ತಾಲೂಕು ನಗರ ಸಮೀಪದ ಹಿರೀಮನೆಯಲ್ಲಿ ಕಳೆದ ಅ.24 ಗುರುವಾರ ಇಂತಹ ದುರಂತಕ್ಕೊಂದು ಸಾಕ್ಷಿಯಾಗಿದೆ.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಿರೀಮನೆ ಗ್ರಾಮ ರಾಜೇಶ್ ಹಾಗು ಅಶ್ವಿನಿ ದಂಪತಿ ಪುತ್ರ ಅಥರ್ವ (2) ಮೃತ ದುರ್ಧೈವಿಯಾಗಿದ್ದಾನೆ.
ಶಾಸಕ ಆರಗ ಜ್ಞಾನೇಂದ್ರ ಹೊಸನಗರ ಭಾಗದ ಆಪ್ತ ಸಹಾಯಕ ರಾಜೇಶ ಹಿರಿಮನೆ, ತಾಪಂ ಮಾಜಿ ಸದಸ್ಯೆ ಅಶ್ವಿನಿ ಪಾಟೀಲ್ ಇವರ ಕರುಳಿನಕುಡಿ ಈ ದುರಂತದಲ್ಲಿ ಧಾರುಣ ಅಂತ್ಯ ಕಂಡಿದ್ದು ಕರುಳು ಹಿಚುಕುವಂತಿದೆ.
2 ವರ್ಷದ ಮಗು ಅಥರ್ವ ಇನ್ನಿಲ್ಲ:
ರಾಜೇಶ ಹಿರೀಮನೆ ಕೊನೆಯ ಪುತ್ರ ಅಥರ್ವ ಕಳೆದ ಅ.24ರ ಗುರುವಾರ ಮೈಮೇಲೆ ಮಾಡಿಟ್ಟಿದ್ದ ಬಿಸಿ ಟೀ ಬೀಳಿಸಿಕೊಂಡು ಗಂಭೀರ ಗಾಯಗೊಂಡಿದ್ದ. ಕೂಡಲೇ ಮಗುವನ್ನು ಮಂಗಳೂರು ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಯ್ತು. ಕಳೆದ 8 ದಿನದಿಂದ ನೀಡುತ್ತಿದ್ದ ಚಿಕಿತ್ಸೆ ಫಲಕಾರಿಯಾಗಿದೆ ಇನ್ನಷ್ಟೇ ಜಗತ್ತು ನೋಡಬೇಕಿದ್ದ ಮಗು ನ.1 ಬೆಳಿಗ್ಗಿನ ಜಾವ ಅಸುನೀಗಿದೆ.
ಅಂದು ನೆರೆಹೊರೆಯಲ್ಲಿ ಒಬ್ಬರು ಹಿರಿಯರು ತೀರಿ ಹೋಗಿದ್ದು, ಅವರ ಮನೆಯಲ್ಲಿ ರಾತ್ರಿ ವೇಳೆ ಇದ್ದ ಜನರಿಗೆ ಟೀ ಮಾಡಿಕೊಡುವ ಸದಾಶದೊಂದಿಗೆ ರಾಜೇಶ ಮತ್ತು ಪತ್ನಿ ಅಶ್ವಿನಿ ತಮ್ಮ ಮನೆಗೆ ಬಂದಿದ್ದಾರೆ. 10 ರಿಂದ 15 ಕಪ್ ಟೀ ಮಾಡಿ ಪಾತ್ರೆಗೆ ಹಾಕಿ ಜಗಲಿ ಮೇಲೆ ಇಡಲಾಗಿತ್ತು. ಆಟವಾಡುತ್ತ ಬಂದ ಮಗು ಅದನ್ನು ಎಳೆದಿದೆ. ಪಾತ್ರೆಯಲ್ಲಿದ್ದ ಬಿಸಿ ಟೀ ಮೈಮೇಲೆ ಸುರಿದಿದೆ. ಮೈಯೆಲ್ಲ ಸುಟ್ಟುಕೊಂಡ ಮಗುವನ್ನು ಕೂಡಲೇ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು.
ಆರಂಭ ಪರವಾಗಿಲ್ಲ ಮಗು ಚೇತರಿಸಿಕೊಳ್ಳುತ್ತಿದೆ ಎಂಬ ಸಂದೇಶ ಸಮಾಧಾನ ತಂದಿತ್ತು. ಆದರೆ ದುರದೃಷ್ಟವಶಾತ್ ಮಗು ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದೆ. ಮದ್ಯರಾತ್ರಿ ಎದ್ದು ಪರೋಪಕಾರ ಮಾಡುವ ಆಶಯವೇ ತೋರಿದ್ದೇ ರಾಜೇಶ ದಂಪತಿಗಳ ಪಾಲಿಗೆ ದುರಂತವಾಗಿದೆ.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…