ಹುಂಚ ಕಲ್ಲು ಕ್ವಾರೆಯಲ್ಲಿ ಜಾರ್ಖಂಡ್ ಮೂಲದ ವ್ಯಕ್ತಿಯ ನಿಗೂಡ ಸಾವು – ಪೊಲೀಸ್ ತನಿಖೆ ಚುರುಕು

ಹುಂಚ ಕಲ್ಲು ಕ್ವಾರೆಯಲ್ಲಿ ಜಾರ್ಖಂಡ್ ಮೂಲದ ವ್ಯಕ್ತಿಯ ನಿಗೂಡ ಸಾವು – ಪೊಲೀಸ್ ತನಿಖೆ ಚುರುಕು

ಜಾರ್ಖಂಡ್ ಮೂಲದ ಕಾರ್ಮಿಕನೊಬ್ಬ ನಿಗೂಡವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಂಡಲಗದ್ದೆ ಗ್ರಾಮದಲ್ಲಿ ನಡೆದಿದೆ.

ಜಾರ್ಖಂಡ್ ಮೂಲದ ಉದಯ್ (26) ಎಂಬ ಕಾರ್ಮಿಕ ಹೊಂಡಲಗದ್ದೆಯ ಕ್ವಾರೆಯೊಂದರಲ್ಲಿ ಕೆಲಸ ಮಾಡುತಿದ್ದು ಶುಕ್ರವಾರ ರಾತ್ರಿ ನಿಗೂಡವಾಗಿ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ.

ನಡೆದಿದ್ದೇನು ..!!??

ಉತ್ತರ ಭಾರತದ ಹಲವು ಕಾರ್ಮಿಕರು ಈ ಕಲ್ಲು ಕ್ವಾರೆಯಲ್ಲಿ ಕೆಲಸ ನಿರ್ವಹಿಸುತಿದ್ದು ಶುಕ್ರವಾರ ರಾತ್ರಿ ಜಾರ್ಖಂಡ್ ಮೂಲದ ಉದಯ್ ನಿಗೂಡವಾಗಿ ಸಾವನ್ನಪ್ಪಿದ್ದಾನೆ. ಶುಕ್ರವಾರ ರಾತ್ರಿ ವಿಪರೀತ ಸಿಡಿಲು ಸಹಿತ ಮಳೆಯಾಗಿದ್ದು ಉದಯ್ ಸಿಡಿಲು ಬಡಿದು ಸಾವನ್ನಪ್ಪಿರಬಹುದು ಅಥವಾ ಗಣಿ ಬ್ಲಾಸ್ಟ್ ನಿಂದ ಸತ್ತಿರಬಹುದು ಎಂಬ ಊಹಾಪೋಹಗಳು ಸ್ಥಳೀಯರಲ್ಲಿ ಹುಟ್ಟಿಕೊಂಡಿತ್ತು.

ಈ ಉಹಾಪೋಹಗಳಿಗೆ ಪೂರಕವೆಂಬಂತೆ ಕಲ್ಲು ಕ್ವಾರೆಯ ಮಾಲೀಕರು ಹಾಗೂ ಸಂಬಂಧಿಸಿದವರು ಘಟನೆಯ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ಮುಟ್ಟಿಸದೇ ಆತುರ ಆತುರದಲ್ಲಿ ಕೋಣಂದೂರು ಆಸ್ಪತ್ರೆಗೆ ಮೃತದೇಹವನ್ನು ಕರೆದೊಯ್ದು ಸ್ವಾಭಾವಿಕ ಸಾವು ಎಂಬ ರಿಪೋರ್ಟ್ ರೆಡಿ ಮಾಡಿಸಿ ರಾತ್ರೋರಾತ್ರಿ ಮೃತದೇಹವನ್ನು ಜಾರ್ಖಂಡ್ ಗೆ ಕಳುಹಿಸಿಕೊಟ್ಟಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಪೊಲೀಸ್ ತನಿಖೆ ಚುರುಕು :

ಘಟನೆಯ ಬಗ್ಗೆ ಮಾಹಿತಿ ತಿಳಿದ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಸಂಬಂಧಿಸಿದವನ್ನು ವಿಚಾರಣೆಗೆ ಒಳಪಡಿಸಿ ಘಟನೆಯ ಸತ್ಯಾಸತ್ಯತೆ ಬಗ್ಗೆ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ಜಾರ್ಖಂಡ್ ಗೆ ಕರೆದೊಯ್ದಿದ್ದ ಉದಯ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಾಪಾಸ್ಸು ಕರೆತರಲಾಗುತ್ತಿದೆ ಎನ್ನಲಾಗುತ್ತಿದೆ.

ಜಾರ್ಖಂಡ್ ನಿಂದ ತುತ್ತು ಅನ್ನಕ್ಕಾಗಿ ವಲಸೆ ಬಂದಿದ್ದ ಬಡ ಕಾರ್ಮಿಕ ಉದಯ್ ಸಿಡಿಲು ಬಡಿದು ಸತ್ತರೋ..!? ಗಣಿ ಬ್ಲಾಸ್ಟ್ ನಿಂದ ಸತ್ತರೋ ಅಥವಾ ಹೃದಯಾಘಾತದಿಂದ ಸತ್ತರೋ ಎಂಬ ಸತ್ಯಾಸತ್ಯತೆ ಪಿಎಸ್‌ಐ ಪ್ರವೀಣ್ ಎಸ್ ಪಿ ರವರ ನಿಷ್ಪಕ್ಷಪಾತ ತನಿಖೆಯಿಂದ ತಿಳಿದುಬರಬೇಕಾಗಿದೆ..

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

17 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

17 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

21 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

23 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

23 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago