POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಅತ್ತೆ- ಸೊಸೆ ಜಗಳದಿಂದ ಮನನೊಂದ ವ್ಯಕ್ತಿ : ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು!

Screenshot 20241103 191657 Chrome.jpg

ಅತ್ತೆ- ಸೊಸೆ ಜಗಳದಿಂದ ಮನನೊಂದ ವ್ಯಕ್ತಿ : ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು!

ಮನೆಯಲ್ಲಿ ಅತ್ತೆ ಸೊಸೆ ಜಗಳದಿಂದ ಮನನೊಂದ ವ್ಯಕ್ತಿ ಒಬ್ಬ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕರುಣಾಕರ (40) ಎನ್ನುವ ವ್ಯಕ್ತಿ ಗುಂಡು ಹಾರಿಸ್ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಾಫಿ ಬೆಳೆಗಾರರಾಗಿದ್ದ ಇವರು ಹೆಂಡತಿ ಹಾಗೂ ತಾಯಿಯ ನಡುವೆ ಹೊಂದಾಣಿಕೆ ಇಲ್ಲದೆ ಯಾವಾಗಲೂ ಗಲಾಟೆ ಮಾಡುತ್ತಿದ್ದರು. ಇದರಿಂದ ತಾಯಿ ಬೇರೆ ಮನೆಯಲ್ಲಿ ವಾಸಿಸುತ್ತಿದ್ದರು.

ಆದರೂ ಕೂಡ ಇವರ ಗಲಾಟೆ ಮುಂದುವರೆದಿದ್ದು, ಇದರಿಂದ ಮನನೊಂದ ಕರುಣಾಕರ್ ಇಂದು ಬೆಳಿಗ್ಗೆ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಕರುಣಾಕರಿಗೆ ಒಂದು ಗಂಡು ಒಂದು ಹೆಣ್ಣು ಮಗುವಿದೆ. ಘಟನಾ ಸ್ಥಳಕ್ಕೆ ಎಳಸೂರು ಠಾಣೆ ಪೋಲಿಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.