ಆಸ್ಪತ್ರೆ ಮುಂಭಾಗದ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವು
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿರುವ ತೆರೆದ ನೀರಿನ ತೊಟ್ಟಿಯಲ್ಲಿ ಶುಕ್ರವಾರ ಮೂರು ವರ್ಷದ ಮಗು ಬಿದ್ದು ಮೃತಪಟ್ಟಿದೆ.
ಮೃತ ಮಗು ಮತ್ತಿಕೋಟೆ ಗ್ರಾಮದ ನಿವಾಸಿ ಇಮ್ರಾನ್ ಪುತ್ರ ಮೊಹಮದ್ ಅಯಾನ್(3) ಎಂದು ತಿಳಿದು ಬಂದಿದೆ. ಇಮ್ರಾನ್ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ನ ಸಂಬಂಧಿಕರ ಆರೋಗ್ಯ ವಿಚಾರಿಸಲು ಮಗುವನ್ನು ಜೊತೆಯಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.
ಈ ಸಂದರ್ಭದಲ್ಲಿ ಆಟವಾಡುತ್ತಾ ಆಸ್ಪತ್ರೆ ಹೊರಗಡೆ ಬಂದ ಮಗು ತೆರೆದ ನೀರಿನ ತೊಟ್ಟಿಯಲ್ಲಿ ಬಿದ್ದು ಮೃತ ಪಟ್ಟಿದೆ ಎಂದು ಅನುಮಾನಿಸಲಾಗಿದೆ. ಮಗು ಮೃತ ಪಟ್ಟ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ಮುಂದುವರಿಸಿದ್ದಾರೆ.
ಆಸ್ಪತ್ರೆ ವೈದ್ಯಾಧಿಕಾರಿಗಳ ವಿರುದ್ಧ ಪ್ರತಿಭಟನೆ:
ಮಗುವಿನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಇದೇ ಸಂದರ್ಭದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ವಿವಿಧ ಸಂಘಟನೆ ಪದಾಧಿಕಾರಿಗಳು ಹಾಗೂ ಮೃತ ಮಗುವಿನ ಸಂಬಂಧಿಕರು ಪ್ರತಿಭಟನೆ ನಡೆಸಿದರು. ತೆರೆದ ನೀರಿನ ತೊಟ್ಟಿ ಇದ್ದರೂ ತೊಟ್ಟಿ ಮುಚ್ಚದೇ ವೈದ್ಯಾಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ನಿರ್ಲಕ್ಷ್ಯ ತೋರಿದ ಈ ವೈದ್ಯಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನೆ ನಡೆಸಿದರು.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…