ಹೋರಿ ಬೆದರಿಸುವ ಹಬ್ಬ ನೋಡಿ ಹಿಂದಿರುಗುತಿದ್ದ ಯುವಕ ಚರಂಡಿಗೆ ಬಿದ್ದು ಸಾವು .!
ದನ ಬರುವುದನ್ನು ನೋಡಿ ಹೆದರಿ ಚರಂಡಿಗೆ ಬಿದ್ದ ಯುವಕ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ನಡೆದಿದೆ.
ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದ ಶೇಕ್ ಸುಹೇಲ್ (೧೮) ಮೃತಪಟ್ಟ ಯುವಕನಾಗಿದ್ದಾನೆ.
ಯಲವಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವನ್ನು ನೋಡಿ ವಾಪಾಸ್ ಸ್ವಗ್ರಾಮಕ್ಕೆ ಮರಳುತ್ತಿದ್ದಾಗ ಹಿಂಬದಿಯಿಂದ ದನ ಬರುವುದನ್ನು ನೋಡಿ ಹೆದರಿ ಓಡುವ ಯತ್ನದಲ್ಲಿ ರಸ್ತೆ ಪಕ್ಕದ ಚರಂಡಿಗೆ ಬಿದ್ದಿದ್ದಾನೆ. ಪರಿಣಾಮ ತಲೆ ಮತ್ತು ಪಕ್ಕೆ ಭಾಗಕ್ಕೆ ಗಾಯವಾಗಿರುತ್ತದೆ.
ತಕ್ಷಣವೇ ಶಿರಾಳಕೊಪ್ಪ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಶೇಕ್ ಸುಹೇಲ್ ಮೃತಪಟ್ಟಿದ್ದಾನೆ.
ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.