POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ

N6391975661731600259519c1ca6af937ef0fc10b6344f6a182257aac3c764c47967651043b47c829c84e70.jpg

ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಹೊಡೆದ ಪರಿಣಾಮ, ಧರ್ಮದರ್ಶಿಗಳ ವಾಹನ ಜಖಂಗೊಂಡು ದೇವಸ್ಥಾನದ ಕಾಂಪೌಂಡ್ ಹಾನಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಬುಧವಾರ ರಾತ್ರಿ ನಡೆದಿದೆ.

ರಾತ್ರಿ 8 ಗಂಟೆಯ ಸುಮಾರಿಗೆ ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನದ ಕಾಂಪೌಂಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಕಾಂಪೌಂಡ್ ಪಕ್ಕದಲ್ಲಿ ನಿಲ್ಲಿಸಿದ್ದ ಧರ್ಮದರ್ಶಿ ಮೋಹನ್ ನಂಬಿಯಾರ್ ಅವರ ಬೊಲೆರೋ ವಾಹನ ಜಖಂಗೊಂಡಿದೆ. ಅಲ್ಲದೇ ಕಾಂಪೌಂಡ್ ಗೂ ಹಾನಿಯಾಗಿದೆ. ಕ್ಯಾಂಟರ್ ಚಾಲಕ ಪದ್ದಿಲೇಟಿ ಬಿನ್ ನಾರಾಯಣಪ್ಪ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ನಿವಾಸಿಯಾಗಿದ್ದು, ಅವರ ಎಡಗಾಲು ಹಾಗೂ ಎಡ ಕೈಗೆ ಪೆಟ್ಟಾಗಿದೆ.

ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.