POSTMAN NEWS

ನೈಜ ಸುದ್ದಿ ನೇರ ಬಿತ್ತರ..

ANANDAPURA | ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ

GridArt 20241115 154704534.jpg

ANANDAPURA | ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ

ಆನಂದಪುರ : ಸಾಲಭಾದೆ ತಾಳಲಾರದೆ ರೈತರೊಬ್ಬರು ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಡೆಹಳ್ಳಿ ಗ್ರಾಪಂ ವ್ಯಾಪ್ತಿಯ ಗೇರುಬೀಸ್ ನಲ್ಲಿ ನಡೆದಿದೆ.

ಗೇರುಬೀಸು ನಿವಾಸಿ ರಾಮಚಂದ್ರ (48) ಮೃತ ದುರ್ಧೈವಿಯಾಗಿದ್ದಾರೆ.

ರಾಷ್ಟ್ರೀಯ ಬ್ಯಾಂಕುಗಳಲ್ಲಿ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ವ್ಯವಸಾಯಕ್ಕಾಗಿ ಸಾಲ  ಮಾಡಿದ್ದು ಬೆಳೆಯು ಕೈಕೊಟ್ಟ ಹಿನ್ನಲೆಯಲ್ಲಿ ಮನನೊಂದು ಮನೆಯ ಹಿಂಭಾಗದಲ್ಲಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.