HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ
ಶ್ರೀಗಂಧದ ಮರದ ತುಂಡನ್ನು ಅಕ್ರಮವಾಗಿ ಸಾಗಿಸುತಿದ್ದ ಆರೋಪಿಯೋರ್ವನನ್ನು ಮಾಲುಸಮೇತ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಹೊಸನಗರ ತಾಲೂಕು ಕಸಬಾ ಹೋಬಳಿ ಕಚ್ಚಿಗೆಬೈಲ್ ಗ್ರಾಮದಲ್ಲಿ ನಡೆದಿದೆ.
ಕಚ್ಚಿಗೆ ಬೈಲ್ ಕಾನಗೋಡು ಹೋಗುವ ರಸ್ತೆಯಲ್ಲಿ ಅಕ್ರಮವಾಗಿ ಗಂಧದ ಮರಗಳನ್ನು ಕಡಿದು ತುಂಡುಗಳನ್ನಾಗಿ ತಯಾರಿಸಿ ಸಾಗಾಣಿಕೆ ಮಾಡುವಾಗ ಆರೋಪಿಯನ್ನ ಅರಣ್ಯ ಇಲಾಖೆ ಬಂಧಿಸಿದ್ದಾರೆ.
ಹನೀಫ್ ಬಿನ್ ಯಾಕೂಬ್ ಸಾಬ್ ವಯಸ್ಸು 48ವರ್ಷ ಬಾನಿಗಾ ವಾಸಿ ಹೊಸಕೇಸರಿ ಗ್ರಾಮ ಹೊಸನಗರ ತಾಲೂಕು ಇವನಿಂದ 3ಕೆಜಿ 400ಗ್ರಾಂ(3.400ಗ್ರಾಂ )ಹಸಿ ಗಂಧದ ಪೀಸ್ ಹಾಗೂ 3ಗರಗಸವನ್ನು ವಶಕ್ಕೆ ಪಡೆಯಲಾಗಿದೆ.
ಸದರಿ ದಾಳಿಯಲ್ಲಿ ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರ ಸಬ್ ಇನ್ಸ್ಪೆಕ್ಟರ್ ವಿನಾಯಕ ಹಾಗೂ ಅವರ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳಾದ ಮಾನ್ಯ ವಲಯ ಅರಣ್ಯಧಿಕಾರಿ ಅನಿಲ್ ಕುಮಾರ್ ಎಸ್ ಹೊಸನಗರ, dyrfo ಆದ ಅನಿಲ್ ಬೆಳ್ಳೆನವರ್, ರಾಘವೇಂದ್ರ ಗೌಡ ಅರಣ್ಯ ರಕ್ಷಕ, ಪುಟ್ಟಸ್ವಾಮಿ, ರಮೇಶ್, ಸುರೇಶ್ ಅರಣ್ಯ ರಕ್ಷಕ ಇವರು ಪಾಲ್ಗೊಂಡಿದ್ದು, ಸದರಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್