POSTMANNEWS

ನೈಜ ಸುದ್ದಿ ನೇರ ಬಿತ್ತರ..

ನಾಪತ್ತೆಯಾಗಿದ್ದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

ನಾಪತ್ತೆಯಾಗಿದ್ದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

ತೀರ್ಥಹಳ್ಳಿ : ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಇಳಿದು ನಂತರ ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ.

ತೀರ್ಥಹಳ್ಳಿ ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ (38) ವರ್ಷ ಸೋಮವಾರ ಬೆಳಗ್ಗೆ ನೀರಿಗೆ ಇಳಿದಿದ್ದರು. ನಂತರ ತುಂಗಾ ನದಿಯಲ್ಲಿ ನಾಪತ್ತೆಯಾಗಿದ್ದ ಶಂಕೆ ವ್ಯಕ್ತವಾಗಿತ್ತು . ನದಿ ದಡದಲ್ಲಿ ಮೊಬೈಲ್, ಬಟ್ಟೆ, ಚಪ್ಪಲಿ ಆಧಾರದಲ್ಲಿ ಅವರು ಬ್ಯಾಂಕ್ ಮ್ಯಾನೇಜರ್ ಎಂದು ಹೇಳಲಾಗಿತ್ತು.

ತುಂಗಾ ನದಿಯಲ್ಲಿ ಅಗ್ನಿಶಾಮಾಕದಳ, ಪೊಲೀಸರು ಸಿಬ್ಬಂದಿಗಳು ಮಂಗಳವಾರ ಸ್ಥಳದಲ್ಲಿ ಹುಡುಕಾಟ ನಡೆಸಿದ್ದರು.

ಬ್ಯಾಂಕ್ ಮ್ಯಾನೇಜರ್ ಒಬ್ಬರೇ ತೀರ್ಥಹಳ್ಳಿಯಲ್ಲಿ ಇದ್ದರು ಎಂದು ಹೇಳಲಾಗುತ್ತಿದ್ದು ಸಂಬಂಧಿಕರು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ.

ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

About The Author

Leave a Reply

Your email address will not be published. Required fields are marked *

Exit mobile version