8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು
8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಶನಿವಾರ ಮಾರ್ನಿಂಗ್ ಸ್ಕೂಲ್ ಮುಗಿಸಿಕೊಂಡು ಮನೆಗೆ ತೆರಳಿದ್ದ ಫಾತಿಮಾ (13) ಎಂಬ ಬಾಲಕಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ.
ನಗರದ ಬಿಹೆಚ್ ರಸ್ತೆಯಲ್ಲಿರುವ ಪ್ರತಿಷ್ಠಿತ ಶೂ ಅಂಗಡಿಯ ಮಾಲೀಕರ ಮಗಳಾಗಿದ್ದ ಫಾತಿಮಾ ಕೆ ಆರ್ ಪುರಂ ನಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ.
ಬಾಲಕಿಯನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಫಾತಿಮಾ ಸಾವನ್ನಪಿರುವುದಾಗಿ ವೈದ್ಯರು ಖಚಿತ ಪಡಿಸಿದ್ದಾರೆ.
ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.