ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು
ಬೋರ್ ವೆಲ್ ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉದ್ರಿ ಸಮೀಪದ ಯಲವಾಟ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಕಾನೂನು ವಿದ್ಯಾರ್ಥಿಯಾಗಿದ್ದ ಬಿದರಗೇರಿ ಗ್ರಾಮದ ಎ.ಎಸ್. ದರ್ಶನ್ (21) ಮೃತ ದುರ್ಧೈವಿಯಾಗಿದ್ದಾರೆ.
ಸೊರಬದಿಂದ ಉದ್ರಿ ಮಾರ್ಗವಾಗಿ ತೆರಳುತ್ತಿದ್ದ ಬೋರ್ ವೆಲ್ ಲಾರಿ ಹಾಗೂ ಯಲವಾಟದಿಂದ ಸೊರಬ ಮಾರ್ಗವಾಗಿ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿಯೇ ಮೃತಪಟ್ಟಿದ್ದಾನೆ.
ಸಾಗರ ಸಮೀಪದ ಉಳ್ಳೂರಿನ ಸಾಗರ ಗಂಗೋತ್ರಿ ಕಾನೂನು ಮಹಾವಿದ್ಯಾಲಯದಲ್ಲಿ ದರ್ಶನ್ ಪ್ರಥಮ ವರ್ಷದ ಕಾನೂನು ಪದವಿ ಶಿಕ್ಷಣವನ್ನು ಪಡೆಯುತ್ತಿದ್ದನು. ರಸ್ತೆಯ ಬದಿಯಲ್ಲಿ ಜೋಳವನ್ನು ಒಣಗಿಸಲು ಹಾಕಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.
ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…
ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…
ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…
ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…
ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…
ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…