ಸಾಲಬಾಧೆಗೆ ರೈತ ಮಹಿಳೆ ವಿಷ ಸೇವಿಸಿ ಅತ್ಮ*ಹತ್ಯೆ

ಸಾಲ ಬಾಧೆ ರೈತ ಮಹಿಳೆ ವಿಷ ಸೇವಿಸಿ ಅತ್ಮಹತ್ಯೆ

ರಿಪ್ಪನ್‌ಪೇಟೆ : ಸಾಲಭಾದೆಯಿಂದ ತತ್ತರಿಸಿದ ಮಹಿಳೆಯೊಬ್ಬರು ಕಳೆನಾಶಕ ಸೇವಿಸಿ ಮೃತಪ್ಪಟ್ಟಿರುವ ಘಟನೆ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಲ್ಲೂರಿನಲ್ಲಿ ನಡೆದಿದೆ.

ಕಲ್ಲೂರಿನ ಮೋಹಿನಿ ಕೋಂ ಶೇಷಪ್ಪ (65) ಮೃತಪಟ್ಟ ದುರ್ಧೈವಿಯಾಗಿದ್ದಾರೆ.

ಅಕಾಲಿಕವಾಗಿ ಬಂದ ಭಾರಿ ಮಳೆಯಿಂದಾಗಿ ಹಾಕಲಾದ ಭತ್ತ ಶುಂಠಿ ಬೆಳೆ ನಾಶವಾಗಿರುವ ಕಾರಣ ಸಹಕಾರ ಸಂಘದಲ್ಲಿ ಮಾಡಿದ ಸಾಲವನ್ನು  ತಿರುವಳಿ ಮಾಡುವುದು ಹೇಗೆ ಎಂಬ ಚಿಂತೆಯಲ್ಲಿ ಮಹಿಳೆ ಕಳೆನಾಶಕ ಸೇವಿಸಿದ್ದಾರೆ, ತಕ್ಷಣ ಕುಟುಂಬಸ್ಥರು ಮಹಿಳೆಗೆ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಿಪ್ಪಿದ್ದಾರೆ.

ಕೈಗೆ ಬಂದು ತುತ್ತು ಬಾಯಿಗೆ ಬರಲಿಲ್ಲ ಎಂಬ ಚಿಂತೆಯಲ್ಲಿ ಈ ಭಾರಿ ಒಳ್ಳೆಯ ಬೆಳೆ ಬರುವುದೆಂಬ ಆಶಾಭಾವನೆಯಲ್ಲಿ ತಳಲೆ ಸಹಕಾರ ಬ್ಯಾಂಕ್‌ನಲ್ಲಿ ಮತ್ತು ಜಿಲ್ಲಾ ಸಹಕಾರ ಸಂಘದ ಸ್ವಸಹಾಯ ಸಂಘದಲ್ಲಿ ಮತ್ತು ಖಾಸಗಿಯಾಗಿ ಒಟ್ಟು 7 ಲಕ್ಷ ರೂ ಸಾಲವನ್ನು ಪಡೆಯಲಾಗಿ ಅಕಾಲಿಕ ಮಳೆಯಿಂದ ಬೆಳೆ ನಾಶಗೊಂಡ ಪರಿಣಾಮ ಮಾಡಿದ ಸಾಲವನ್ನು ಮರುಪಾವತಿಸುವುದು ಹೇಗೆ ಎಂಬ ಮಾನಸಿಕ ಚಿಂತೆಯಲ್ಲಿ ಬಳಲಿ ಕೊನೆಗೆ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಮೃತ ಮಹಿಳೆಯ ಮಗ ನೀಡಿದ ದೂರಿನನ್ವಯ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

19 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

20 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

21 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago