ರಿಪ್ಪನ್‌ಪೇಟೆ ಪಟ್ಟಣದ ವಿವಿಧೆಡೆ ಸಂಭ್ರಮದ ಕನ್ನಡ ರಾಜ್ಯೋತ್ಸವ


ರಿಪ್ಪನ್‌ಪೇಟೆ : ನಾಡಿನಾದ್ಯಂತ 69ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪಟ್ಟಣದಾದ್ಯಂತ ಕನ್ನಡ ಕಲರವದ ಕಂಪು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಪಟ್ಟಣದ ವ್ಯಾಪ್ತಿಯ ಗ್ರಾಮ ಪಂಚಾಯತ್, ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜು , ಸರ್ಕಾರಿ ಕಚೇರಿಗಳಲ್ಲಿ ಮತ್ತು ಕಸ್ತೂರಿ ಕನ್ನಡ ಸಂಘದ ವತಿಯಿಂದ 69ನೇ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಸ್ತೂರಿ ಕನ್ನಡ ಸಂಘದ ವತಿಯಿಂದ ಶಿವಮೊಗ್ಗ ರಸ್ತೆಯ ಗಾಂಧಿ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಧ್ವಜಾರೋಹಣ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅರ್ ಎ ಚಾಬುಸಾಬ್ , ಜಿ ಎಸ್ ವರದರಾಜ್ ಮತ್ತು ಸಾಗರದ ಹಬೀಬ್ ಸಾಬ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಈ ಸಂಧರ್ಭದಲ್ಲಿ ಕಸ್ತೂರಿ ಕನ್ನಡ ಸಂಘದ ಪದಾಧಿಕಾರಿಗಳು , ಹಾಗೂ ಕನ್ನಡಾಭಿಮಾನಿಗಳು ಇದ್ದರು.