POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಕೋಡೂರು ಮೂಲದ ಯುವಕ ಸ್ಥಳದಲ್ಲಿಯೇ ಸಾವು

GridArt 20241103 210844572.jpg

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಕೋಡೂರು ಮೂಲದ ಯುವಕ ಸ್ಥಳದಲ್ಲಿಯೇ ಸಾವು

ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಕೋಡೂರು ಮೂಲದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಜೋಳದಗುಡ್ಡೆಯ ವರದಾನದಿ ಸೇತುವೆ ಬಳಿ ನಡೆದಿದೆ.

ಈ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಬುಲ್ಡೋಜರ್ ಗುಡ್ಡ ಗ್ರಾಮದ ನಿವಾಸಿ ಸುದರ್ಶನ ಬಂದಿಗೇರ್ (22) ಮೃತಪಟ್ಟ ಯುವಕನಾಗಿದ್ದಾನೆ.

ಸುದರ್ಶನ ತನ್ನ ಅತ್ತೆ ಬೆಳ್ಳಮ್ಮ ಪುಟ್ಟಪ್ಪ (65) ಜೊತೆಯಲ್ಲಿ ಬೈಕ್ ನಲ್ಲಿ ಹೊಸನಗರದಿಂದ ಚಂದ್ರಗುತ್ತಿ ಸಮೀಪದ ಭದ್ರಾಪುರ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಮಾರುತಿ 800 ಕಾರು ಡಿಕ್ಕಿಯಾಗಿ ಬೈಕ್ ಸವಾರ ಸುದರ್ಶನ್ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ,ಅಪಘಾತದಲ್ಲಿ ತೀವ್ರ ಗಾಯಗೊಂಡ ಬೆಳ್ಳಮ್ಮ ಪುಟ್ಟಪ್ಪ ರವರಿಗೆ ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.