ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಕೋಡೂರು ಮೂಲದ ಯುವಕ ಸ್ಥಳದಲ್ಲಿಯೇ ಸಾವು
ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಕೋಡೂರು ಮೂಲದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಜೋಳದಗುಡ್ಡೆಯ ವರದಾನದಿ ಸೇತುವೆ ಬಳಿ ನಡೆದಿದೆ.
ಈ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಬುಲ್ಡೋಜರ್ ಗುಡ್ಡ ಗ್ರಾಮದ ನಿವಾಸಿ ಸುದರ್ಶನ ಬಂದಿಗೇರ್ (22) ಮೃತಪಟ್ಟ ಯುವಕನಾಗಿದ್ದಾನೆ.
ಸುದರ್ಶನ ತನ್ನ ಅತ್ತೆ ಬೆಳ್ಳಮ್ಮ ಪುಟ್ಟಪ್ಪ (65) ಜೊತೆಯಲ್ಲಿ ಬೈಕ್ ನಲ್ಲಿ ಹೊಸನಗರದಿಂದ ಚಂದ್ರಗುತ್ತಿ ಸಮೀಪದ ಭದ್ರಾಪುರ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಮಾರುತಿ 800 ಕಾರು ಡಿಕ್ಕಿಯಾಗಿ ಬೈಕ್ ಸವಾರ ಸುದರ್ಶನ್ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ,ಅಪಘಾತದಲ್ಲಿ ತೀವ್ರ ಗಾಯಗೊಂಡ ಬೆಳ್ಳಮ್ಮ ಪುಟ್ಟಪ್ಪ ರವರಿಗೆ ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…