ದುಬಾರಿ ಮೊತ್ತಕ್ಕೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾದ ರಿಷಬ್ ಪಂತ್
ಇಂಡಿಯನ್ ಪ್ರೀಮಿಯರ್ ಲೀಗ್ ( IPL) 2025ರ ಮೆಗಾ ಹರಾಜಿನಲ್ಲಿ ರಿಷಬ್ ಪಂತ್ ದಾಖಲೆ ಬರೆದಿದ್ದಾರೆ. ಬರೋಬ್ಬರಿ 27 ಕೋಟಿ ರೂಪಾಯಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾಗಿದ್ದಾರೆ. ಈ ಮೂಲಕ ಐಪಿಎಲ್‌ನ ದುಬಾರಿ ಆಟಗಾರ ಎನ್ನುವ ದಾಖಲೆ ಮಾಡಿದ್ದಾರೆ.
ರಿಷಬ್ ಪಂತ್‌ಗಾಗಿ ಮೊದಲು ಲಕ್ನೋ ಸೂಪರ್ ಜೈಂಟ್ಸ್ ಬಿಡ್ ಮಾಡಿತು.
ಬಳಿಕ ಆರ್ ಸಿಬಿ, ಎಸ್‌ಆರ್ ಎಚ್ ಫ್ರಾಂಚೈಸಿಗಳು ಬಿಡ್ ಮಾಡಿದವು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಎಲ್‌ಎಸ್‌ಜಿ ಜೊತೆ ಮೊದಲಿನಿಂದಲೇ ಜಿದ್ದಿಗೆ ಬಿದ್ದಂತೆ ಸ್ಪರ್ಧೆ ಮಾಡಿತು.
ಆರ್ ಸಿಬಿ ಬಳಿಕ ಸ್ಪರ್ಧೆಯಿಂದ ಹಿಂದೆ ಸರಿಯಿತು, ಸನ್‌ರೈಸರ್ಸ್ ಹೈದರಾಬಾದ್ ರೇಸ್‌ಗೆ ಬಂದಿತು, ಆದರೆ ಫ್ರಾಂಚೈಸಿ ಅವರನ್ನು ಬಿಟ್ಟುಕೊಡಲು ತಯಾರಿರಲಿಲ್ಲ, 20.75 ಕೋಟಿ ರೂಪಾಯಿಗೆ ಎಲ್‌ಎಸ್‌ಜಿ ಬಿಡ್ ಮಾಡಿತು. ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಆರ್ ಟಿಎಂ ಬಳಸುವುದಾಗಿ ಹೇಳಿತು, ಎಲ್‌ಎಸ್‌ಜಿ ಬಿಡ್ ಮೊತ್ತವನ್ನು 27 ಕೋಟಿ ರೂಪಾಯಿಗೆ ಏರಿಸಿದ್ದರಿಂದ ಡೆಲ್ಲಿ ಕ್ಯಾಪಿಟಲ್ಸ್ ಹಿಂದೆ ಸರಿಯಿತು. ಅಂತಿಮವಾಗಿ ಪಂತ್ ಲಕ್ನೋ ಪಾಲಾದರು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದ ರಿಷಬ್ ಪಂತ್, ಕಾರಣಾಂತರದಿಂದ ಐಪಿಎಲ್ ಮೆಗಾ ಹರಾಜಿಗೆ ಮುನ್ನ ತಂಡದಿಂದ ಹೊರಬಂದಿದ್ದಾರೆ. ಐಪಿಎಲ್ ರಿಟೆನ್ಷನ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅವರನ್ನು ಬಿಡುಗಡೆ ಮಾಡಿತು. ತಾವು ತಂಡದಿಂದ ಹೊರಬಂದಿದ್ದು ಹಣದ ವಿಚಾರಕ್ಕಾಗಿ ಅಲ್ಲ ಎನ್ನುವುದನ್ನು ರಿಷಬ್ ಪಂತ್ ಸ್ಪಷ್ಟಪಡಿಸಿದ್ದರು.
ರಿಷಬ್ ಪಂತ್ 2018ರಿಂದ 2024ರವರೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕಾಗಿ ಆಡಿದ್ದಾರೆ. 2018ರಲ್ಲಿ ಬರೋಬ್ಬರಿ 15 ಕೋಟಿ ರೂಪಾಯಿಗೆ ಹರಾಜಾಗಿದ್ದ ಅವರು, 2022ರಿಂದ 16 ಕೋಟಿ ರೂಪಾಯಿ ಪಡೆಯುತ್ತಿದ್ದರು. ಕಳೆದ ಮೂರು ವರ್ಷದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಾರಿದ್ದ ಅವರು, ಬಳಿಕ ತಂಡದಿಂದ ಹೊರಬಂದಿದ್ದಾರೆ.
ರಿಷಬ್ ಪಂತ್ ಐಪಿಎಲ್ ಅಂಕಿ ಅಂಶ
ರಿಷಬ್ ಪಂತ್ 111 ಐಪಿಎಲ್ ಪಂದ್ಯಗಳನ್ನು ಆಡಿದ್ದು 3284 ರನ್ ಗಳಿಸಿದ್ದಾರೆ. 35.3 ಸರಾಸರಿ ಹೊಂದಿದ್ದು 148.9 ಸ್ಟ್ರೈಕ್ ರೇಟ್ ಹೊಂದಿದ್ದಾರೆ. 18 ಅರ್ಧಶತಕ ಮತ್ತು 1 ಶತಕ ಗಳಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್