ರಿಪ್ಪನ್‌ಪೇಟೆ | ಅಸಾಧರಣ ಧೈರ್ಯ ಪ್ರದರ್ಶಿಸಿದ್ದ ಬಾಳೂರು ಶಾಲೆಯ ಮಣಿಕಂಠನಿಗೆ ರಾಜ್ಯ ಸರ್ಕಾರದ ಶೌರ್ಯ ಪ್ರಶಸ್ತಿ ಪ್ರಕಟ

ರಿಪ್ಪನ್‌ಪೇಟೆ | ಅಸಾಧರಣ ಧೈರ್ಯ ಪ್ರದರ್ಶಿಸಿದ್ದ ಬಾಳೂರು ಶಾಲೆಯ ಮಣಿಕಂಠನಿಗೆ ರಾಜ್ಯ ಸರ್ಕಾರದ ಶೌರ್ಯ ಪ್ರಶಸ್ತಿ ಪ್ರಕಟ

ರಿಪ್ಪನ್‌ಪೇಟೆ : ಸಹಪಾಠಿಯ ಶಾಲಾ ಬ್ಯಾಗ್ ನಲ್ಲಿದ್ದ ನಾಗರ ಹಾವನ್ನು ಗಮನಿಸಿ ತಕ್ಷಣವೇ ಸಮಯಪ್ರಜ್ಞೆ ಮತ್ತು ಚಾಣಾಕ್ಷತನದಿಂದ ಬ್ಯಾಗ್ ಜಿಪ್ ಮುಚ್ಚಿ ಬ್ಯಾಗನ್ನು ಶಾಲಾ ಆವರಣಕ್ಕೆ ಕೊಂಡೊಯ್ದು ಅಸಾಧಾರಣ ಧೈರ್ಯ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಹೊಯ್ಸಳ ಶೌರ್ಯ ಪ್ರಶಸ್ತಿಗೆ ಬಾಳೂರು ಶಾಲೆಯ ವಿದ್ಯಾರ್ಥಿ ಆರ್ ಮಣಿಕಂಠ ಭಾಜನರಾಗಿದ್ದಾರೆ.

ರಾಜ್ಯ ಸರ್ಕಾರದ ವತಿಯಿಂದ ಮಕ್ಕಳಿಗೆ ಪ್ರತಿವರ್ಷ ಮಕ್ಕಳ ದಿನಾಚರಣೆ ನಿಮಿತ್ತ ನೀಡಲಾಗುವ ಹೊಯ್ಸಳ ಶೌರ್ಯ ಪ್ರಶಸ್ತಿಗೆ ಆರ್ ಮಣಿಕಂಠ ಆಯ್ಕೆಯಾಗಿದ್ದು ದಿನಾಂಕ: 29-11-2024 ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾನೆ.

ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿಯನ್ನು ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ, ಶಾಲಾ ಶಿಕ್ಷಣ ಇಲಾಖೆಯ ಮಾನ್ಯ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಒಳಗೊಂಡಂತೆ ಎಲ್ಲಾ ಅಧಿಕಾರಿ ವೃಂದದವರು, ಸ್ಥಳೀಯ ಜನಪ್ರತಿನಿಧಿಗಳು, ಎಸ್.ಡಿ.ಎಂ.ಸಿ, ಸಮಸ್ತ ಗ್ರಾಮಸ್ಥರು ಅಭಿನಂದಿಸಿರುತ್ತಾರೆ.

ಅಂದು ನಡೆದಿದ್ದೇನು..!!?

ದಿನಾಂಕ 01 – 09 -2023 ರಂದು  ರಿಪ್ಪನ್ ಪೇಟೆ ಸಮೀಪದ ಬಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿ ಭುವನ್ ಬ್ಯಾಗಿನಲ್ಲಿ ಸದ್ದಿಲ್ಲದೆ ಮಲಗಿದ್ದ ನಾಗರಹಾವನ್ನು ಮಣಿಕಂಠ ಧೈರ್ಯದಿಂದ ಎದುರಿಸಿ ಮುಂದಾಗುವ ಭಾರಿ ಅನಾಹುತವನ್ನು ತಪ್ಪಿಸಿದ್ದನ್ನು

ಅಂದು ಶುಕ್ರವಾರ ಬೆಳಗ್ಗೆ  ಶಾಲೆಯ ಬೆಲ್ಲು ಹೊಡೆದು ತರಗತಿ ಪ್ರಾರಂಭವಾದಾಗ  ನಲಿಕಲಿ ತರಗತಿಯ  ಶಿಕ್ಷಕ   ಪಾಠ ಓದಲು  ಪುಸ್ತಕ  ಬ್ಯಾಗಿನಿಂದ ಹೊರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿ, ಹಾಜರಾತಿ ಕರೆಯುತ್ತಿದ್ದರು.ವಿದ್ಯಾರ್ಥಿ ಭುವನ್  ಶಿಕ್ಷಕರ ಅಣತಿಯಂತೆ  ಪುಸ್ತಕ ಹೊರತೆಗೆದಾಗ ಖಾಲಿ ಬ್ಯಾಗಿನಲ್ಲಿ  ಮಲಗಿದ್ದ ಹಾವನ್ನು  ಕಂಡಿದ್ದಾನೆ. ತನ್ನ ಪಕ್ಕದಲ್ಲಿ ಕುಳಿತಿದ್ದ ಸಹಪಾಠಿ ಆರ್ ಮಣಿಕಂಠ ಅವನಿಗೆ ಬ್ಯಾಗನಲ್ಲಿ ಇರುವ  ಹಾವನ್ನು  ತೋರಿಸಿದ್ದಾನೆ.ಹಾವನ್ನು  ಕಂಡ  ತಕ್ಷಣವೇ ಮಣಿಕಂಠಬ್ಯಾಗಿನ ಜಿಪ್ ಎಳೆದು ಹಾವು  ಹೊರಬರದಂತೆ ಮಾಡಿದ್ದಾನೆ. ನಂತರ ಬ್ಯಾಗು ಸಮೇತ  ಶಿಕ್ಷಕರ ಬಳಿ ಬಂದು  ಇದರಲ್ಲಿ  ಹಾವು ಇದೆ ಎಂದು    ತಿಳಿಸಿದ್ದಾನೆ.

ವಿದ್ಯಾರ್ಥಿಯ ಮಾತಿಗೆ ಚಕಿತರಾದ ಶಿಕ್ಷಕರು ಬ್ಯಾಗನ್ನು ಹೊರತಂದು ತೆರೆದು ನೋಡಿದಾಗ ಅದರಲ್ಲಿ ಸದ್ದಿಲ್ಲದೆ ಸುರುಳಿ ಸುತ್ತಿಕೊಂಡು ಬೇಟೆಗಾಗಿ ಕಾದು ಕುಳಿತ ನಾಗರ ಹಾವನ್ನು  ಕಂಡು ಬೆಚ್ಚಿ ಬೀಳುವ ಸರದಿ  ಶಿಕ್ಷಕರದಾಗಿತ್ತು.

ಶಾಲೆಯ ಕೂಗಳತೆ ದೂರದಲ್ಲಿದ್ದ ವಿದ್ಯಾರ್ಥಿ ಭುವನ್ ಮನೆಯಿಂದ ಪೋಷಕರನ್ನು ಕರೆಯಿಸಿದ ಶಿಕ್ಷಕರು, ಘಟನೆಯ ನೈಜ್ಯತೆ  ಹಾಗೂ ಸಹಪಾಠಿ  ಮಣಿಕಂಠನ ಸಮಯ ಪ್ರಜ್ಞೆಯನ್ನು ಪೋಷಕರಿಗೆ ಮನವರಿಕೆ ಮಾಡಿಕೊಟ್ಟು ನಂತರ ಪೋಷಕರ ಸಮ್ಮುಖದಲ್ಲಿ ಬ್ಯಾಗಿನಲ್ಲಿದ್ದ ವಿಷಪೂರಿತ  ನಾಗರಹಾವನ್ನು ಶಿಕ್ಷಕ ವೃಂದ ಜೊತೆಗೂಡಿ  ಸಮೀಪದ ಕಾಡಿಗೆ ಬಿಟ್ಟು ಬಂದಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

14 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

14 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

18 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

20 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

21 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago