ಮೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ – ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಜೀವತೆತ್ತನಾ ಮೆಸ್ಕಾಂ ನೌಕರ

ಮೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ – ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಜೀವತೆತ್ತನಾ ಮೆಸ್ಕಾಂ ನೌಕರ

ಅಧಿಕಾರಿಗಳು ನಡೆಸಿದ ಭ್ರಷ್ಟಾಚಾರಕ್ಕೆ ಮೆಸ್ಕಾಂ ನೌಕರನೊಬ್ಬ ಜೀವ ತೆತ್ತ ಘಟನೆ ಆಯನೂರು ಸಮೀಪದ ಕುಂಸಿಯ ಮೆಸ್ಕಾಂ ವಸತಿ ಗೃಹದಲ್ಲಿ ನಿನ್ನೆ(ಗುರುವಾರ) ನಡೆದಿದೆ.

ನಂದೀಶ್ (38) ಎಂಬಾತನೇ ಆತ್ಮಹತ್ಯೆಗೆ ಶರಣಾದ ದುರ್ದೈವಿ.

ಇಲಾಖೆಯ ವಸತಿ ಗೃಹದಲ್ಲೇ ಮೆಸ್ಕಾಂ ಮೇಸ್ತ್ರೀ ನಂದೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಂದೀಶ್ ವಸತಿ ಗೃಹದಲ್ಲಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನದಲ್ಲದ ತಪ್ಪಿಗೆ ಜೀವ ಕಳೆದುಕೊಳ್ಳುತ್ತಿದ್ದೇನೆ ಎಂದು ನಂದೀಶ್ ಹೇಳಿದ್ದಾರೆ. ಆತ್ಮಹತ್ಯೆಗೂ ಮುನ್ನ ನಂದೀಶ್ ಮಾಡಿರುವ ಆಡಿಯೋ ವೈರಲ್ ಆಗಿದೆ.

ಕಳೆದ ಸೆಪ್ಟೆಂಬರ್ 7 ರಂದು ನಡೆದಿದ್ದ ದುರ್ಘಟನೆಗೆ ಸಂಭವಿಸಿದಂತೆ ನನ್ನನ್ನು ಬಲಿಪಶು ಮಾಡಲಾಗಿದೆ ಎಂದು ನಂದೀಶ್ ಹೇಳಿದ್ದಾರೆ. ಕುಂಸಿ ಮೆಸ್ಕಾಂ ಘಟಕದಲ್ಲಿ, ಹೊರಗುತ್ತಿಗೆದಾರರಾಗಿದ್ದ ಯುವರಾಜ್ ವಿದ್ಯುತ್ ಶಾಕ್‌ನಿಂದ ಗಾಯಾಳು ಆಗಿದ್ದರು. ಹೊರಗುತ್ತಿಗೆದಾರ ವಿಜಯ್ ಕುಮಾರ್ ಬಳಿ ಯುವರಾಜ್ ಕೆಲಸ ಮಾಡುತ್ತಿದ್ದರು. ಮೆಸ್ಕಾಂ ಅನುಮತಿ ಪಡೆಯದೇ ಏಕಾಏಕಿ ಕಂಬ ಹತ್ತಿ, ದುರಸ್ತಿ ಮಾಡಲು ವಿಜಯ ಕುಮಾರ್ ಸೂಚಿಸಿದ್ದರು. ಎಲ್ಸಿ ಪಡೆಯದೇ ಯುವರಾಜ್ ಗೆ ಕೆಲಸ ಮಾಡಲು ವಿಜಯ ಕುಮಾರ್ ಸೂಚಿಸಿದ್ದರು. ವಿಜಯ್ ಕುಮಾರ್ ಹಾಗೂ ನಂದೀಶ್ ಅವರು ಗಾಯಾಳು ಯುವರಾಜ್ ಅನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದರು.

ದುರಸ್ತಿ ಆಗಿದೆ ಎಂದು ಅಧಿಕಾರಿಗಳು ಬಿಲ್ ಪಾಸ್ ಮಾಡಿದ್ದ ಕೆಲಸ ಮಾಡಿಸಲು ವಿಜಯ್ ಕುಮಾರ್ ಮುಂದಾಗಿದ್ದರು. ಗಾಯಾಳು ಯುವರಾಜ್‌ನ ಚಿಕಿತ್ಸೆಗೆಂದ್ದು ಮೃತ ನಂದೀಶ್ 4.50 ಲಕ್ಷ ಖರ್ಚು ಮಾಡಿದ್ದರು. ಇದಾದ ನಂತರ ಗಾಯಾಳು ಯುವರಾಜ್ ಸಂಬಂಧಿಕರು ಮತ್ತಷ್ಟು ಹಣ ನೀಡುವಂತೆ ಪೀಡುಸುತ್ತಿದ್ದರಂತೆ.

ಸದರಿ ವಿಷಯದಲ್ಲಿ ಮೆಸ್ಕಾಂನ ಮೇಲಾಧಿಕಾರಿಗಳು ಮೌನ ವಹಿಸಿದ್ದರು. ಮತ್ತಷ್ಟು ಹಣ ಕೊಡದ ಹೊರತು ಯುವರಾಜ್ ನನ್ನು ಆಸ್ಪತ್ರೆಯಿಂದ ಮನೆಗೆ ಕರೆದುಕೊಂಡು ಹೋಗುವುದಿಲ್ಲ ಎಂದು ಗಾಯಾಳು ಯುವರಾಜ್ ಸಂಬಂಧಿಕರು ಹೇಳಿದ್ದರು. ಈ ವಿಷಯದಲ್ಲಿ ಗಾಯಾಳು ನಂದೀಶ್ ಮಾನಸಿಕ ಹಿಂಸೆ ಅನುಭವಿಸಿದ್ದರು.

ಘಟನೆಯಿಂದ ಹೊರಬರಲು ಬೇರೆ ದಾರಿ ಕಾಣದೆ ನಂದೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಇಡೀ ಘಟನೆ ಕುರಿತು ನಂದೀಶ್ ಆಡಿಯೋ ಮಾಡಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎ1 ಗುತ್ತಿಗೆದಾರ ವಿಜಯ್ ಕುಮಾರ್, ಸೇರಿದಂತೆ ಗಾಯಳು ಯುವರಾಜ್, ರವಿ, ಜಗದೀಶ್ ಹಾಗೂ ಯುವರಾಜ್ ಸಂಬಂಧಿಕರ ಮೇಲೆ ಎಫ್‌ಐಆರ್ ದಾಖಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

18 hours ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

18 hours ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

18 hours ago

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…

18 hours ago

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ

ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…

1 day ago

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

2 days ago