ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ಸ್ಟೇಬಲ್ ಬರ್ಬರ ಹತ್ಯೆ: ಮದುವೆ ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೊಲೆ
ನ.11ರಂದು ಮದುವೆಯಾಗಬೇಕಿದ್ದ ಪೊಲೀಸ್ ಪೇದೆಯೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ದುದ್ದ ಗ್ರಾಮದ ಹೊರವಲಯದ ಡಾಬಾ ಸರ್ಕಲ್‌ನಲ್ಲಿ ಸೋಮವಾರ ರಾತ್ರಿ ನಡೆದಿದೆ.
ಕೊಲೆಯಾದ ಪೇದೆ ಬಾಗೇಶಪುರ ಗ್ರಾಮದ ನಿವಾಸಿ ಹರೀಶ್ ವಿ (32) ಎಂದು ಗುರುತಿಸಲಾಗಿದ್ದು, ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಕೊಲೆಯಾದ ಹರೀಶ್ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯಲ್ಲಿ ಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದರು.ಹರೀಶ್ ಅವರ ವಿವಾಹವು ನ.11ರಂದು ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ವಿವಾಹ ಆಮಂತ್ರಣ ಪತ್ರಿಕೆಗಳನ್ನು ಸಂಬಂಧಿಕರಿಗೆ ಹಂಚಿ ಕಳೆದ ರಾತ್ರಿ ಮನೆಗೆ ಬೈಕಿನಲ್ಲಿ ಹಿಂದಿರುಗುತ್ತಿದ್ದ ಈ ಕೃತ್ಯ ಎಸಗಲಾಗಿದೆ. ದುಷ್ಕರ್ಮಿಗಳು ಅವರ ಬೈಕಿನ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ನಿನ್ನೆ ತಮ್ಮ ವಿವಾಹ ಕುರಿತಾದ ಆಮಂತ್ರಣ ಪತ್ರಿಕೆ ಸಂಬಂಧಿಕರಿಗೆ ನೀಡಿ ಬೈಕ್ ಮೇಲೆ ವಾಪಸ್ ಬರುವಾಗ ಹಂತಕರು ಅಟ್ಯಾಕ್ ಮಾಡಿ ಕೊಂದು ಹಾಕಿದ್ದಾರೆ.
ಹತ್ಯೆಯಾದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೇತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ದುದ್ದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply
Cancel reply