ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯ – ಶಾಸಕ ಬೇಳೂರು

ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯ – ಶಾಸಕ ಬೇಳೂರು

ಹೊಸನಗರ : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಬಹಳ ಮುಖ್ಯ ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯಪಟ್ಟರು.

ಮಾರುತಿಪುರ ಗ್ರಾಪಂ ವ್ಯಾಪ್ತಿಯ ನಿರೇರಿ ಸರ್ಕಾರಿ ಶಾಲೆಯಲ್ಲಿ ನೂತನ ಶಾಲಾ ಕೊಠಡಿ,ಮೈದಾನ ಕಾಮಗಾರಿಗೆ ಶಂಕುಸ್ಥಾಪನೆ ಹಾಗೂ ಧ್ಯಜಕಟ್ಟೆ ಉದ್ಘ್ತಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ  ಸರ್ಕಾರಿ ಶಾಲೆಗಳ ಅಭಿವೃದ್ಧಿ ಸರ್ಕಾರದ ಕೆಲಸವಷ್ಟೇ ಎಂಬ ಮನಸ್ಥಿತಿ ಸರಿಯಲ್ಲ. ಸ್ಥಳೀಯರು, ಉಳ್ಳವರು, ದಾನಿಗಳು ಅಗತ್ಯ ಸಹಕಾರ, ಪ್ರೋತ್ಸಾಹ ನೀಡಿದರೆ ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗೊಳ್ಳಲಿದೆ. ಜತೆಗೆ ನಮ್ಮ ಮಕ್ಕಳು ಕಲಿಕೆಯಲ್ಲಿ ಪ್ರಗತಿ ಸಾಧಿಸಿ, ಊರಿನ ಕೀರ್ತಿ ಹೆಚ್ಚಿಸಲಿದ್ದಾರೆ ಎಂದರು.

ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ಅದೆಷ್ಟೋ ಜನ ದೇಶದ ಅತ್ಯುನ್ನತ ಹುದ್ದೆಗಳನ್ನು, ಐಎಎಸ್‌, ಐಪಿಎಸ್‌ ಅಧಿಕಾರಗಳನ್ನು ಪಡೆದಿದ್ದಾರೆ; ವಿಜ್ಞಾನಿ, ಇಂಜಿನಿಯರ್‌, ವೈದ್ಯರಾಗಿದ್ದಾರೆ. ಭಾರತ ರತ್ನ, ಪದ್ಮಭೂಷಣ, ಪದ್ಮವಿಭೂಷಣ, ಪದ್ಮಶ್ರೀ, ಜ್ಞಾನಪೀಠ, ಸರಸ್ವತಿ ಸಮ್ಮಾನ್‌ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲಿ ಓದಿದ ಅದೆಷ್ಟೋ ಜನರು ವಿಶ್ವಕ್ಕೇ ದಾರಿ ತೋರಿಸಿದ್ದಾರೆ ಇಂತಹ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಬೇಕಿದೆ. ಈ ಶಾಲೆಯ ರಂಗಮಂದಿರ ಹಾಗೂ ಧ್ಯಜದ ಕಟ್ಟೆಯನ್ನು ಕಟ್ಟಡ ಕಾರ್ಮಿಕರ ಸಂಘದವರು ಶ್ರಮದಾನ ಮಾಡುವ ಮೂಲಕ ನಿರ್ಮಿಸಿಕೊಟ್ಟಿರುವುದು ಶ್ಲಾಘನೀಯವಾಗಿದ್ದು ಕಾರ್ಮಿಕರ ಸಂಘದ ಉತ್ತಮ ಕೆಲಸ ಹೀಗೆ ಮುಂದುವರೆಯಲಿ ಎಂದು ಆಶಿಸಿದರು. ಶಾಲೆಯ ಮೈದಾನದ ಕಾಮಗಾರಿಗೆ ಒಂದು ಲಕ್ಷ ರೂ ಅನುದಾನವನ್ನು ಸ್ಥಳದಲ್ಲಿಯೇ ಘೋಷಿಸಿದರು.

ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಕಾರ್ಯಾಧ್ಯಕ್ಷ ಸುಂದರ್ ಬಾಬು ಮಾತನಾಡಿ ಸರ್ಕಾರಿ ಶಾಲೆಗಳು ನಮ್ಮ ಅಸ್ಮಿತೆಯಾಗಿದ್ದು ಅದನ್ನು ಉಳಿಸುಕೊಳ್ಳುವಲ್ಲಿ ನಾವೆಲ್ಲರೂ ಸರ್ಕಾರಿ ಶಾಲೆಗಳೊಂದಿಗೆ ಕೈಜೋಡಿಸಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕಾಗಿದೆ , ನೀರೇರಿ ಶಾಲೆಯಲ್ಲಿ ರಂಗಮಂದಿರ ಹಾಗೂ ಧ್ವಜದ ಕಟ್ಟೆಯ ಕೊರತೆ ಇರುವ ಬಗ್ಗೆ ಕಟ್ಟಡ ಕಾರ್ಮಿಕರ ಸಂಘದ ಹೊಸನಗರ ಗ್ರಾಮಾಂತರ ಅಧ್ಯಕ್ಷ ಮಹಮ್ಮದ್ ಹುಸೇನ್ ಹಾಗೂ ಪ್ರಭಾಕರ್ ಆಚಾರ್ ಗಮನಕ್ಕೆ ತಂದು ಅವರ ತಂಡದೊಂದಿಗೆ ಇಂತಹ ಮಹತ್ಕಾರ್ಯ ನಡೆಸಿಕೊಟ್ಟಿದ್ದಾರೆ ಅವರಿಗೆ ಜಿಲ್ಲಾ ಸಂಘದ ಪರವಾಗಿ ಅಭಿನಂದನೆಗಳು ತಿಳಿಸಿದರು.

ಈ ಸಂಧರ್ಭದಲ್ಲಿ ಮಾರುತಿಪುರ ಗ್ರಾಪಂ ಅಧ್ಯಕ್ಷೆ ದೀಪೀಕಾ ಆರ್ , ತಾಲೂಕ್ ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಚಿದಂಬರ ,ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಸಂಜಯ್ ಕುಮಾರ್ ,ಬಿ ಜಿ ಚಂದ್ರಮೌಳಿ, ಹೊಸನಗರ ಕ್ಷೇತ ಶಿಕ್ಷಣಾಧಿಕಾರಿ ಎಚ್ ಆರ್ ಕೃಷ್ಣಮೂರ್ತಿ , ಮಹಮ್ಮದ್ ಹುಸೇನ್ , ಪ್ರಭಾಕರ್ ಆಚಾರ್ , ಶಿವಮೂರ್ತಿ ಬೆಳ್ಳೂರು ಹಾಗೂ ಇನ್ನಿತರರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

15 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

15 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

19 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

21 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

22 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago