ರಿಪ್ಪನ್‌ಪೇಟೆ – NREG ಯೋಜನೆಯಡಿ ಕ್ರೀಯಾ ಯೋಜನೆಯ ವಿಶೇಷ ಗ್ರಾಮಸಭೆ

ರಿಪ್ಪನ್‌ಪೇಟೆ : 2025-26ನೇ ಸಾಲಿನ ಎನ್.ಆರ್.ಈ.ಜಿ ಯೋಜನೆಯಡಿ ಇಂದು ಗ್ರಾಮ ಪಂಚಾಯ್ತಿ ಗ್ರಾಮ ಕ್ರಿಯಾ ಯೋಜನೆಯನ್ನು ತಯಾರಿಸುವ ವಿಶೇಷ ಗ್ರಾಮ ಸಭೆಯು ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆಯ ನೋಡಲ್ ಆಧಿಕಾರಿಯಾಗಿ ಹೊಸನಗರ ತಾಲ್ಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶೇಷಾಚಲ ಭಾಗವಹಿಸಿ ಸರ್ಕಾರದ ಯೋಜನೆಯ ಕುರಿತು ನಾಗರೀಕರಿಗೆ ಜಾಗೃತಿ ಮೂಡಿಸಿ ಸೌಲಭ್ಯದ ಸದ್ಬಳಕೆಗೆ ಕರೆ ನೀಡಿದರು.

ಈ ಸಂಧರ್ಭದಲ್ಲಿ ರಿಪ್ಪನ್‌ಪೇಟೆ ಪೊಲೀಸ್ ವಸತಿ ಗೃಹಕ್ಕೆ ರಸ್ತೆ ನಿರ್ಮಾಣ ಮಾಡುವ ವಿಚಾರದಲ್ಲಿ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ಸಭೆಯ ಗಮನಸೆಳೆಯುತಿದ್ದಂತೆ NREG ಯೋಜನೆಯಡಿಯಲ್ಲಿ ಈ ರಸ್ತೆ ಕಾಮಗಾರಿ ನಡೆಸಲು ಸಾಮಾಗ್ರಿಗಳ ಅನುಪಾತದ ಕೊರತೆಯಾಗುವುದು ಎಂದು ನೋಡಲ್ ಅಧಿಕಾರಿ ಹೇಳುತಿದ್ದಂತೆ ಟಿ ಆರ್ ಕೃಷ್ಣಪ್ಪ ಸಭೆಯ ಆಶಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು ಈ ಸಂದರ್ಭದಲ್ಲಿ ಕೆಡಿಪಿ ಸದಸ್ಯ ಆಸೀಫ಼್ ಭಾಷಾ ಮಧ್ಯ ಪ್ರವೇಶಿಸಿ ಉದ್ಯೋಗ ಖಾತರಿ ಅಡಿಯಲ್ಲಿ ಪೊಲೀಸ್ ವಸತಿಗೃಹದ ರಸ್ತೆ ನಿರ್ಮಿಸಲು ಸಾಧ್ಯವಾಗುದಿಲ್ಲ ಆದ್ದರಿಂದ ಈ ಬಗ್ಗೆ ಶಾಸಕರ ಗಮನಕ್ಕೆ ತಂದು ಅನುದಾನ ಕೊಡಿಸುವ ಭರವಸೆ ನೀಡಿದರು.

ಎಲ್ಲಾ ಗ್ರಾಮ ಸಭೆಗಳಲ್ಲೂ ಗೈರಾಗುವ ಸಾಮಾಜಿಕ ಅರಣ್ಯ ಇಲಾಖೆಯವರು ಇಂದಿನ ಗ್ರಾಮ ಸಭೆಗೆ ಗೈರು ಹಾಜರಾಗುವ ಮೂಲಕ ಕರ್ತವ್ಯ ಲೋಪವೆಸಗುತಿದ್ದು ಈ ಬಗ್ಗೆ ಆವರಿಗೆ ನೋಟಿಸ್ ನೀಡುವಂತೆ ಸಭೆ ಒಕ್ಕೊರಲ ನಿರ್ಧಾರ ಮಾಡಿದರು.

ಗ್ರಾಮ ಪಂಚಾಯ್ತಿ ಸದಸ್ಯರಾದ ಡಿ.ಈ.ಮಧುಸೂದನ್, ಆಸಿಫ್, ಗಣಪತಿ, ಪ್ರಕಾಶ ಪಾಲೇಕರ್, ಎನ್.ಚಂದ್ರೇಶ್, ಆರ್.ವಿ.ನಿರೂಪ್, ವೇದಾವತಿ, ಸಾರಾಭಿ, ಅನುಪಮಾ ರಾಕೇಶ್, ತೋಟಗಾರಿಕಾ ಇಲಾಖೆಯ ಅಧಿಕಾರಿ ಚಂದ್ರಶೇಖರ್, ಕೃಷಿ ಇಲಾಖೆಯ ಮತ್ತು ಕಿರಿಯ ಅಭಿಯಂತರರು ಹಾಜರಿದ್ದರು.

ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ನಾಗರಾಜ್ ಸ್ವಾಗತಿಸಿದರು. ಲಕ್ಷ್ಮಿ ನಾಗರಾಜ್ ನಿರೂಪಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಪ್ಪುಪಟ್ಟಿ ಕಟ್ಟಿ ಧರಿಸಿ ಸಭೆಗೆ ಹಾಜರಾದ ಬಿಜೆಪಿ ಬೆಂಬಲಿತ ಸದಸ್ಯರು

ಉದ್ಯೋಗ ಖಾತ್ರಿ ಕ್ರಿಯಾ ಯೋಜನೆಯ 2025-26ನೇ ಸಾಲಿನ ವಿಶೇಷ ಗ್ರಾಮಸಭೆಗೆ ಹಾಜರಾಗುವಾಗ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ ಸದಸ್ಯರಾದ ಜಿ.ಡಿ.ಮಲ್ಲಿಕಾರ್ಜುನ, ಮಂಜುಳ, ವನಮಾಲ, ಪಿ.ರಮೇಶ್, ದಾನಮ್ಮ ಕಪ್ಪುಪಟ್ಟಿ ಕೈಗೆ ಕಟ್ಟಿಕೊಂಡು ಸಭೆಗೆ ಹಾಜರಾದರು.

ಈ ಬಗ್ಗೆ ಮಾತನಾಡಿದ ಗ್ರಾಪಂ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ ಈಗಾಗಲೇ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ವಿರುದ್ದ ಹಲವಾರು ಆರೋಪಗಳು ಕೇಳಿಬಂದ ಹಿನ್ನಲೆಯಲ್ಲಿ ಅವರ ರಾಜೀನಾಮೆಗೆ ಒತ್ತಾಯಿಸಿ ಹಿಂದಿನ ಸಾಮಾನ್ಯ ಸಭೆ ಬಹಿಷ್ಕರಿಸಿದ್ದೇವು ಆದರೆ  ಗ್ರಾಮದ ಅಭಿವೃದ್ದಿಗೆ ತೊಡಕಾಗಬಾರದು ಎನ್ನುವ ಹಿನ್ನಲೆಯಲ್ಲಿ ಇಂದಿನ ಕ್ರೀಯಾ ಯೋಜನೆಯ ಗ್ರಾಮಸಭೆಗೆ ಕಪ್ಪು ಪಟ್ಟಿ ಧರಿಸಿ ಹಾಜರಾಗಿದ್ದೇವೆ ಎಂದರು.

ಸಾಗರ ಮತ್ತು ಹೊಸನಗರ ತಾಲೂಕಿಗೆ ನಾನು ಒಬ್ಬನೇ ಸಹಾಯಕ ತಾಂತ್ರಿಕ ಅಭಿಯಂತರನಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಅನೇಕ ಕಾರ್ಯದ ಒತ್ತಡದಲ್ಲಿ ಗ್ರಾಮಸಭೆಗೆ ಹಾಜರಾಗಲು ಸಾಧ್ಯವಾಗಲಿಲ್ಲ.

ರೋಹಿತ್
ಸಹಾಯಕ ತಾಂತ್ರಿಕ ಅಭಿಯಂತರರು
ಸಾಮಾಜಿಕ ಅರಣ್ಯ ಇಲಾಖೆ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

15 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

15 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

19 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

21 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

22 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago