January 11, 2026

ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ – 200 ಆಟೋಗಳನ್ನು ವಶಕ್ಕೆ ಪಡೆದ ಪೊಲೀಸರು

ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ – 200 ಆಟೋಗಳನ್ನು ವಶಕ್ಕೆ ಪಡೆದ ಪೊಲೀಸರು

ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಶಿವಮೊಗ್ಗ ಪೊಲೀಸರು ಬಿಸಿ ಮುಟ್ಟಿಸಿದ್ದು, 200 ಆಟೋ ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ ನಗರದಲ್ಲಿ ಆಟೋ ಮೀಟರ್ ಗಳನ್ನು ಬಳಸದೆ, ಹೆಚ್ಚಿನ ದರವನ್ನು ಕೇಳುತ್ತಿರುವ ಬಗ್ಗೆ ಬಂದ ಮಾಹಿತಿಯ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಆಟೋಗಳನ್ನು ತಡೆದು, ಮೀಟರ್ ಬಳಕೆ ಮಾಡುತ್ತಿರುವ ಬಗ್ಗೆ ತಪಾಸಣೆ ಮಾಡಿ, 100 IMV ಪ್ರಕರಣ ದಾಖಲಿಸಿ, 200 ವಾಹನ ವಶಕ್ಕೆ ಪಡೆದಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, Area Domination ಭಾಗವಾಗಿ ವಾಹನ ತಪಾಸಣೆ ಮಾಡಿ ಲಘು ಪ್ರಕರಣ, IMV ಪ್ರಕರಣ ಮತ್ತು ಡಿ.ಡಿ. ಪ್ರಕರಣಗಳನ್ನು ದಾಖಲಿಸಿದೆ ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *

Exit mobile version