ಅಭಿವೃದ್ಧಿ ಸಹಿಸದೇ ಬಿಜೆಪಿ ಪಕ್ಷದಿಂದ ಜನರ ದಿಕ್ಕು ತಪ್ಪಿಸಲು ಪ್ರತಿಭಟನೆ – ಬಿ ಪಿ ರಾಮಚಂದ್ರ

ಅಭಿವೃದ್ಧಿ ಸಹಿಸದೇ ಬಿಜೆಪಿ ಪಕ್ಷದಿಂದ ಜನರ ದಿಕ್ಕು ತಪ್ಪಿಸಲು ಪ್ರತಿಭಟನೆ – ಬಿ ಪಿ ರಾಮಚಂದ್ರ

ರಿಪ್ಪನ್‌ಪೇಟೆ : ಪಟ್ಟಣದ ಅಭಿವೃದ್ಧಿಯನ್ನು ಸಹಿಸದೇ ಗ್ರಾಮ ಪಂಚಾಯತಿ ಅಧ್ಯಕ್ಷರ ವಿರುದ್ಧ ಆಧಾರ ರಹಿತವಾದ ಆರೋಪವನ್ನು ಮಾಡಿ ರಾಜಕೀಯ ಪ್ರೇರಿತವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾದರೆ ಅವರ ವಿರುದ್ದ ನಾವು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಜಿಪಂ ಮಾಜಿ ಸದಸ್ಯ ಬಿ‌ ಪಿ ರಾಮಚಂದ್ರ ಹೇಳಿದರು.

ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಧನಲಕ್ಷಿ ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾದ ನಂತರ ಮಹಿಳೆಯಾಗಿದ್ದರೂ ಭ್ರಷ್ಟಾಚಾರ ರಹಿತವಾದ ಸಮರ್ಥ ಆಡಳಿತವನ್ನು ನೀಡುತ್ತಿದ್ದು ಇದನ್ನು ಸಹಿಸದ ಬಿಜೆಪಿ ಪಕ್ಷದವರು ಅವರ ಮೇಲೆ ಆಧಾರರಹಿತ ಆರೋಪ ಹೊರಿಸಿ ಅವರ ರಾಜೀನಾಮೆಗೆ ಒತ್ತಾಯಿಸುತಿದ್ದಾರೆ.ಹುರುಳಿಲ್ಲದ ಆರೋಪಗಳಿಂದ ರಾಜಿನಾಮೆ ನೀಡಬೇಕಾದ ಅಗತ್ಯವಿಲ್ಲ. ಮತ್ತೆ ಮತ್ತೆ ಅನಾವಶ್ಯಕವಾಗಿ ಸಾರ್ವಜನಿಕರನ್ನು ದಾರಿತಪ್ಪಿಸುವ ವ್ಯವಸ್ಥೆಗೆ ಮುಂದಾದರೆ ಬಿಜೆಪಿ ನಾಯಕರುಗಳ ಬಾರ್ ಮಾಲೀಕರ ಬಳಿ ಲಂಚ ಪಡೆದ ಆಡಿಯೋ ಹಾಗೂ ಅವರದೇ ಪಕ್ಷದ ಮಹಿಳಾ ಕಾರ್ಯಕರ್ತೆಯ ಬಗ್ಗೆ ಕೀಳು ಅಭಿರುಚಿಯಲ್ಲಿ ಮಾತನಾಡಿರುವ ದಾಖಲಾತಿಗಳು ನಮ್ಮ ಬಳಿಯೂ ಇದ್ದು ನಾವು ಸಾರ್ವಜನಿಕವಾಗಿ ಬಿಡುಗಡೆಗೊಳಿಸಿ ನಿಮ್ಮ ಸಾಚತನವನ್ನು ಜಗಜ್ಜಾಹಿರುಗೊಳಿಸಬೇಕಾಗುತ್ತದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ಚಂದ್ರಮೌಳಿ ಮಾತನಾಡಿ ಗ್ರಾಪಂ ಅಧ್ಯಕ್ಷೆ ಮತ್ತು ಗ್ರಾ.ಪಂ.ಸದಸ್ಯ ರಿಪ್ಪನ್‌ಪೇಟೆ ಘಟಕದ ಅಧ್ಯಕ್ಷ ಗಣಪತಿ ರವರ ಮೇಲೆ ಕ್ಷುಲ್ಲಕ ಕಾರಣವನ್ನು ಇಟ್ಟುಕೊಂಡ ಬಿಜೆಪಿ ಮುಖಂಡರು ಸುಳ್ಳು ಅಪಾದನೆಗಳನ್ನು ಮಾಡುತ್ತ ರಾಜಕೀಯ ಮಾಡುತ್ತಿದ್ದಾರೆ.ಅತ್ಯುತ್ತಮವಾಗಿ ಅಭಿವೃದ್ಧಿ ಕೆಲಸ ಮಾಡುತ್ತಿರುವ ಗ್ರಾಪಂ ಅಧ್ಯಕ್ಷರು ಹಾಗೂ ಕಾಂಗ್ರೇಸ್ ಪಕ್ಷದ ಏಳಿಗೆಯನ್ನು ಸಹಿಸದೆ ತಮ್ಮ ತಪ್ಪುಗಳನ್ನು ಮರೆಮಾಚುವ ಉದ್ದೇಶದ ಕುತಂತ್ರ ನಡೆಸುತ್ತಿದ್ದಾರೆ. ಆಧಾರವಿಲ್ಲದ ಎಡಿಟ್ ಆಡಿಯೋ ಇಟ್ಟುಕೊಂಡು ಅಧ್ಯಕ್ಷರ ರಾಜೀನಾಮೆ ಕೇಳುತಿದ್ದು ಈಗಿನ ತಾಂತ್ರಿಕ ಯುಗದಲ್ಲಿ ಯಾರಧ್ವನಿಯನ್ನು ಯಾರು ಬೇಕಾದರೂ ಅಣುಕುಮಾಡಬಹುದು ಇಂತಹ ಆಧಾರ ವಿಲ್ಲದ ಸುಳ್ಳು ಆರೋಪಗಳಿಗೆ ನಿಮಗೆ ಉತ್ತರ ನೀಡಲು ಕಾಂಗ್ರೆಸ್ ಪಕ್ಷ ತಯಾರಿದೆ, ಅಂಜುವ ಪ್ರಶ್ನೆಯೇ ಇಲ್ಲಾ. ನಿಮ್ಮ ವರ್ತನೆ ಹೀಗೆಯೇ ಮುಂದುವರೆದರೆ ಬಿಜೆಪಿ ಪಕ್ಷದ ಮುಖಂಡರ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷರಿಂದ ಮಾನನಷ್ಟ ಮೊಕದ್ದಮೆ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ಼್ ಹಾಗೂ ಕೆಡಿಪಿ ಸದಸ್ಯರಾದ ಚಂದ್ರೇಶ್ ಎನ್ ಮಾತನಾಡಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ,ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎಂ ಪರಮೇಶ್, ಕೆಡಿಪಿ ಸದಸ್ಯ ಆಸೀಫ್ ಭಾಷಾ, ಗ್ರಾಪಂ ಸದಸ್ಯರಾದ ಮಧುಸೂಧನ್, ಪ್ರಕಾಶ್ ಪಾಲೇಕರ್, ಗಣಪತಿ, ನಿರುಪಮರಾಕೇಶ್, ಫ್ಯಾನ್ಸಿ ರಮೇಶ್, ಶ್ರೀಧರ ಚಿಗುರು ,ವಿಜಯ್ ಮಳವಳ್ಳಿ ಇನ್ನಿತರರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

17 hours ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

17 hours ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

19 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

19 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

1 day ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

1 day ago