ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್!
ವಕ್ಪ್ ವಿಚಾರದಲ್ಲಿ ಮುಸ್ಲಿಂರ ವಿರುದ್ದ ಮಾತನಾಡಿದ್ದಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ದ ಸುಮೋಟೋ ಕೇಸ್ ದಾಖಲಾಗಿದೆ. ಕಳೆದ 13ರಂದು ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪ ಅವರು ಮುಸ್ಲಿಂ ಅವರ ವಿರುದ್ಧ ಹೇಳಿಕೆ ನೀಡಿದ್ದರು.
ಈಗ ಮಾಜಿ ಸಿಎಂ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.ವಕ್ಫ್ ವಿಚಾರಕ್ಕೆ ಸಂಬಂಧಿಸಿ ಈಶ್ವರಪ್ಪ ಅವರು ಮುಸ್ಲಿಂ ಸಮುದಾಯಕ್ಕೆ ನೋವಾಗುವಂತೆ ಮಾತುಗಳನ್ನು ಹೇಳಿದ್ದರು. ಇದೀಗ ಮಾಜಿ ಸಿಎಂ ಕೆಎಸ್ ಈಶ್ವರಪ್ಪ ಅವರ ವಿರುದ್ಧ ಜಯನಗರ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ವಕ್ಫ್ ಜಾರಿಗೆ ಬಂದರೆ, ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳಬೇಕಾಗುತ್ತದೆ. ಮುಸ್ಲಿಂ ಅವರಿಗೆ ರಸ್ತೆಯಲ್ಲಿ ಹುಡುಕಿ ಹುಡುಕಿ ಹೊಡೆಯುತ್ತಾರೆ. ಇನ್ನು ಭವಿಷ್ಯದಲ್ಲಿ ಮುಸ್ಲಿಂ ಅವರನ್ನು ಕೊಲ್ಲುವಂತಹ ದಿನ ಬರುತ್ತದೆ ಎಂದು ಈಶ್ವರಪ್ಪ ಹೇಳಿದ್ದರು. ಈಶ್ವರಪ್ಪ ಅವರ ಈ ಹೇಳಿಕೆಯಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತದೆ ಎಂಬ ಕಾರಣದಿಂದ ಅವರ ವಿರುದ್ಧ ಸುಮೋಟೋ ಕೇಸ್ ದಾಖಲಾಗಿದೆ.
ರಾಜ್ಯದ ಹಲವು ಭಾಗಗಳಲ್ಲಿ ರೈತರ ಭೂಮಿ ಜತೆ ಮಠ, ದೇವಸ್ಥಾನ, ಪುರಾತತ್ವ ಇಲಾಖೆ ಭೂಮಿ, ಸರಕಾರಿ ಶಾಲೆಯ ಜಾಗವನ್ನೂ ವಕ್ಫ್ ಆಸ್ತಿ ಎಂದು ಪಹಣಿಯಲ್ಲಿ ನಮೂದಿಸುತ್ತಿದ್ದಾರೆ. ಇದು ಸೂಕ್ತವಲ್ಲ. ಮಠ, ಮಂದಿರ, ಬಡ ರೈತರ ಭೂಮಿ ದೋಚುತ್ತಿರುವ ವಕ್ಫ್ ಮಂಡಳಿ ನಡೆಯಿಂದ ಮುಸ್ಲಿಂ ಸಮುದಾಯ ಅಧೋಗತಿಗೆ ಹೋಗುತ್ತದೆ. ಹಿಂದೂ ಸಮಾಜದ ಆಸ್ತಿ ಕಬಳಿಸುತ್ತಿರುವುದರ ವಿರುದ್ಧ ಎಲ್ಲ ಜಾತಿಯ ಸಾಧು ಸಂತರು ಎಚ್ಚೆತ್ತಿದ್ದಾರೆ. ಇದಕ್ಕಾಗಿ ಹೋರಾಟ ನಡೆಸಲು ಸಿದ್ಧರಾಗಿದ್ದಾರೆ ಎಂದು ವಕ್ಫ್ ವಿರುದ್ಧ ಈಶ್ವರಪ್ಪ ಗುಡುಗಿದ್ದರು.
ವಕ್ಫ್ ಬೋರ್ಡ್ ಆಸ್ತಿ ವಿವಾದ ಹಿನ್ನೆಲೆ ರೈತರಿಗೆ ನೀಡಲಾಗಿದ್ದ ನೋಟಿಸ್ ವಾಪಾಸ್ ಪಡೆಯುವ ವಿಚಾರವಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮ್ಯುಟೇಷನ್ ಮಾಡಲು ಯಾವುದೇ ಕಚೇರಿ, ಪ್ರಾಧಿಕಾರದ ನಿರ್ದೇಶನಗಳನ್ನು ತಕ್ಷಣ ಹಿಂಪಡೆಯಬೇಕು. ಮ್ಯುಟೇಷನ್ ಪ್ರಕ್ರಿಯೆ ಕೂಡಲೇ ಸ್ಥಗಿತಗೊಳಿಸಬೇಕು. ಈ ಕುರಿತು ನೀಡಲಾದ ನೋಟೀಸ್‌ಗಳನ್ನ ಹಿಂಪಡೆಯುವುದು, ಸದರಿ ಜಮೀನುಗಳಲ್ಲಿ ವ್ಯವಸಾಯ ಮಾಡುವ ರೈತರ ವಿರುದ್ಧ ಯಾವುದೇ ಕ್ರಮ ಜರುಗಿಸುವಂತಿಲ್ಲ ಎಂದು ಅದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆದೇಶದ ಬಳಿಕವೂ ಮೇಲಾಧಿಕಾರಿಗಳ ಅನುಮತಿ ಇಲ್ಲದೆ ನೆನಪೋಲೆ ಹೊರಡಿಸುವ ಅಧಿಕಾರಿಗಳ ವಿರುದ್ದ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಇಲಾಖೆ ಅಪರ ಕಾರ್ಯದರ್ಶಿ ಡಾ.ಬಿ.ಉದಯ್ ಕುಮಾರ್ ಶೆಟ್ಟಿ ಆದೇಶ ಹೊರಡಿಸಿದ್ದಾರೆ.