ರಿಪ್ಪನ್ ಪೇಟೆ : ಮುಸ್ಲಿಂ ಯುವಕ ಹಾಗೂ ಆತನ ಸ್ನೇಹಿತರು ಹಿಂದೂ ಸಂಪ್ರದಾಯದಂತೆ ಲಕ್ಷ್ಮಿ ಪೂಜೆ ನೆರವೇರಿಸಿರುವ ಮೂಲಕ ಸೌಹಾರ್ಧತೆ ಮೆರೆದಿರುವ ಘಟನೆ ನಡೆದಿದೆ.
ತನ್ನು ಅರಸಾಳು ಎಂಬ ಯುವಕ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿರುವ ತನ್ನ ಮೊಬೈಲ್ (ತನ್ವಿ ಮೊಬೈಲ್ ವರ್ಲ್ಡ್) ಅಂಗಡಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಹಿಂದೂ ಸಂಪ್ರದಾಯದಂತೆ ಕಳಸ ಇರಿಸಿ, ಹಣ್ಣು-ಕಾಯಿ ನೈವೇದ್ಯ ಅರ್ಪಿಸುವ ಮೂಲಕ ಪುರೋಹಿತರಾದ ಕೋಡೂರು ಪ್ರಮೋದ ಜೋಯಿಸ್ ಅವರಿಂದ ಪೂಜೆ ನೆರವೇರಿಸಿದ್ದಾರೆ.
ನಾಡಿನೆಲ್ಲೆಡೆ ಲಕ್ಷ್ಮಿ ಪೂಜೆ ಹಾಗೂ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಸೌಹಾರ್ದತೆ ಕಾರಣಕ್ಕೆ ಹಿಂದೂಗಳ ಹಬ್ಬವನ್ನು ಮುಸ್ಲಿಂ ಬಾಂಧವರು ಹಾಗೂ ಮುಸ್ಲಿಂರ ಹಬ್ಬವನ್ನು ಹಿಂದೂ ಧರ್ಮದವರು ಆಚರಿಸುವುದನ್ನು ಅಲ್ಲಲ್ಲಿ ನೋಡಿದ್ದೇವೆ. ಅದೇ ಮಾದರಿಯ ಸುದ್ದಿ ಇಲ್ಲಿ ವರದಿಯಾಗಿದೆ.
ತನ್ನು ಅವರು ಸತತ 5 ವರ್ಷದಿಂದ ಇದೇ ಮಾದರಿಯಲ್ಲಿ ಲಕ್ಷ್ಮೀ ಪೂಜೆಯನ್ನು ನಡೆಸಿಕೊಂಡು ಬಂದಿದ್ದಾರೆ. ಅದೇ ರೀತಿ ಇಲ್ಲಿ ಮುಸ್ಲಿಂ ಸಂಪ್ರದಾಯದಾಯಂತೆ ಕೂಡ ಧರ್ಮಗುರುಗಳಿಂದ ಪೂಜೆ ನೆರವೇರಿಸಲಾಯಿತು.
ಹಬ್ಬಗಳು ಸಂಬಂಧಗಳನ್ನು ಗಟ್ಟಿಗೊಳಸಿಬೇಕು. ಜಾತಿ- ಧರ್ಮ ನೆಪ ಮಾತ್ರ. ಎಲ್ಲರೂ ಒಗ್ಗಟ್ಟಿನಿಂದ ಕೂಡಿ ಹಬ್ಬಗಳನ್ನು ಆಚರಿಸೋಣ. ಸೌಹಾರ್ಧತೆ ಸಾರೋಣ ಎನ್ನುತ್ತಾರೆ ಮೊಬೈಲ್ ಅಂಗಡಿ ಮಾಲೀಕ ತನ್ನು ಅರಸಾಳು
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply
Cancel reply