ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
ಸಾಗರ : ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೀಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಳಿಕೊಪ್ಪ ಗ್ರಾಮದ ಹಾನಂಬಿಯಲ್ಲಿ ನಡೆದಿದೆ.
ಜನ್ನತ್ ನಗರದ ಪ್ರಕಾಶ್ ಶೆಟ್ಟಿ(36) ಮೃತ ದುರ್ಧೈವಿಯಾಗಿದ್ದಾನೆ.
ಅರಳೀಕೊಪ್ಪ ಗ್ರಾಮದ ಹಾನಂಬಿ ಹೊಳೆಯ ಮೇಲ್ಭಾಗ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಯುವಕನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಪ್ರಕಾಶ್ ಶೆಟ್ಟಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೋಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.