w
Headlines
Home » ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

GridArt 20241101 192531450.jpg

ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಗೌಡ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಬುಧವಾರ ಶಿವಮೊಗ್ಗದ ನೆಹರೂ ಕ್ರೀಡಾಂಗಣ ದಲ್ಲಿ ನಡೆದ  17 ವರ್ಷದೊಳಗಿನ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಬಾಲಕರ ಜಾವಲಿನ್ ಸ್ಪರ್ಧೆಯಲ್ಲಿ ಈತ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.

ಹೆದ್ದಾರಿಪುರದ ಆಶಾ ಮತ್ತು ಈಶ್ವರ್ ದಂಪತಿಗಳ ಪುತ್ರನಾದ ಸಾತ್ವಿಕ್ ಗೌಡ ರವರಿಗೆ ಹೆದ್ದಾರಿಪುರ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ರಮೇಶ್ ಕುಮಾರ್ ತರಬೇತಿ ನೀಡಿದ್ದಾರೆ.

ಜಾವಲಿನ್ ಸ್ಪರ್ಧೆಯಲ್ಲಿ ಅದ್ವಿತೀಯ ಸಾಧನೆಗೈದ ವಿದ್ಯಾರ್ಥಿ ಸಾತ್ವಿಕ್ ಗೌಡರವರಿಗೆ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು, ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.