ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ – 62ವರ್ಷದ ವೃದ್ದನಿಗೆ ಶಿಕ್ಷೆ ಪ್ರಕಟ

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ – 62ವರ್ಷದ ವೃದ್ದನಿಗೆ ಶಿಕ್ಷೆ ಪ್ರಕಟ

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 27 ವರ್ಷದ ಮಹಿಳೆಯನ್ನ ಲೈಂಗಿಕವಾಗಿ ಬಳಸಿಕೊಂಡ 62 ವರ್ಷದ ವೃದ್ಧನಿಗೆ ಇಲ್ಲಿನ 2ನೇ ಜೆಎಂಎಫ್ ಸಿ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

2016ನೇ ಸಾಲಿನಲ್ಲಿ ಶಿವಮೊಗ್ಗ ಟೌನ್ ನ 62 ವರ್ಷದ ವ್ಯಕ್ತಿಯೊಬ್ಬ 27 ವರ್ಷದ ಮಹಿಳೆಯೊಬ್ಬಳಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದನು.  ಆಕೆಯ ಫೋಟೋಗಳನ್ನು ಇಟ್ಟುಕೊಂಡು, ಒಂದು ವೇಳೆ ದೂರು ನೀಡದರೆ ನಿನ್ನ ಮರ್ಯಾದೆ ತೆಗೆಯುವುದಾಗಿ ಬೆದರಿಕೆ ಹಾಕಿದ್ದನು. ನೊಂದ ಮಹಿಳೆ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ  ಕಲಂ 417, 406, 420, 506 ಐಪಿಸಿ ರೀತ್ಯಾ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಆಗಿನ ತನಿಖಾಧಿಕಾರಿಯಾಗಿದ್ದ ಕೋಟೆ ಪೊಲೀಸ್ ಠಾಣೆಯ ಸಿಪಿಐ ಚಂದ್ರಪ್ಪ. ಕೆ.ತನಿಖೆ ಪೂರೈಸಿ ಘನ 2ನೇ ಜೆಎಂಎಫ್ಸಿ ನ್ಯಾಯಾಲಯ, ಶಿವಮೊಗ್ಗಕ್ಕೆ ಆರೋಪಿತನ ವಿರುದ್ದ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ  ಕಿರಣ್‌ ಕುಮಾರ್ ವಾದ ಮಂಡಿಸಿದ್ದರು. ಘನ 2ನೇ ಜೆಎಂಎಫ್ಸಿ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು ಆರೋಪಿಯ ವಿರುದ್ದ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಶಾರದಾ ಕೊಪ್ಪದರವರು ಪ್ರಕರಣದ ಆರೋಪಿಗೆ 1  ವರ್ಷ 6  ತಿಂಗಳು ಸಾದಾ ಕಾರಾವಾಸ ಶಿಕ್ಷೆ ಮತ್ತು ರೂ 40,000/- ರೂ ಗಳ ದಂಡ, ದಂಡದ ಮೊತ್ತದಲ್ಲಿ 36,000/- ರೂಗಳನ್ನು ನೊಂದ ಮಹಿಳೆಗೆ ನೀಡಲು ಆದೇಶಿಸಿರುತ್ತಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago