ಪೆಟ್ರೋಲ್ ಹಾಕುತ್ತಿದ್ದಂತೆಯೇ ಹೊತ್ತಿ ಉರಿದ ಕಾರು- ಐವರು ಬಚಾವ್
ಪೆಟ್ರೋಲ್ ಹಾಕುವ ಸಂದರ್ಭದಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ತೀರ್ಥಹಳ್ಳಿ ರಸ್ತೆಯ ಹೊನ್ನಾಪುರ ಗ್ರಾಮದ ಬಳಿ ನಡೆದಿದೆ.
ಮಹಮ್ಮದ್ ಸನಾವುಲ್ಲಾ ಎಂಬವರಿಗೆ ಸೇರಿದ ಓಮ್ನಿ ಕಾರು ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿದ್ದ ಐವರು ಭಾರೀ ಅಪಾಯದಿಂದ ಪಾರಾಗಿದ್ದಾರೆ.
ಮಹಮ್ಮದ್ ಸನಾವುಲ್ಲಾ ಅವರು ಮಂಗಳೂರಿನ ಆಸ್ಪತ್ರೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ಈ ವೇಳೆ ಕಾರಿನಲ್ಲಿ ಪೆಟ್ರೋಲ್ ಖಾಲಿಯಾಗಿದ್ದು, ಹೀಗಾಗಿ ಪೆಟ್ರೋಲ್ ಹಾಕುವ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.
ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಕಾರಿನಲ್ಲಿದ್ದವರು ಹೊರಗೆ ಓಡಿಬಂದು ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಐವರಲ್ಲಿ ಒಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇತ್ತ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಘಟನೆ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…