Headlines

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ : ಕನ್ನಡ ಭಾಷೆ ಉಳಿಸಿ ಬೆಳಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಸಿದ್ದರಾಗಬೇಕು, ಕಲೆ ಸಾಹಿತ್ಯದ ತವರೂರು ಶಿವಮೊಗ್ಗ ಜಿಲ್ಲೆಯಾಗಿದ್ದು ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಅಭಿಮಾನಿ ಬಳಗದ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ನಾಡು ನುಡಿ ಸಂರಕ್ಷಣೆ ವಿಷಯ ಬಂದಾಗ ನಾವು ಸಂಘಟನೆಯಾಗುವುದರೊಂದಿಗೆ ಹೋರಾಟ ನಡೆಸಬೇಕಾದ ಅನಿವಾರ್ಯತೆ ಇದೆ ,ಕನ್ನಡ ನೆಲ-ಜಲ ಗಡಿ ಭಾಷೆಯ ವಿಷಯ ಬಂದಾಗ ರಾಜಕೀಯ ಪಕ್ಷ ದೂರವಿಟ್ಟು ಧ್ವನಿ ಎತ್ತುವ ಮೂಲಕ ಸಂಘಟನಾತ್ಮಕ ಹೋರಾಟಕ್ಕೆ ಸದಾ ಸಿದ್ದನಾಗಿದ್ದೇನೆಂದು ಹೇಳಿದರು.

ಕಾರ್ಯಕ್ರಮವುನ್ನುದ್ದೇಶಿಸಿ ಮಲೆನಾಡು ಪ್ರದೇಶಾಭಿವೃದ್ದಿ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ  ,ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ , ಶಿಮೂಲ್ ಅಧ್ಯಕ್ಷರಾದ ವಿಧ್ಯಾಧರ್ ಮಾತನಾಡಿದರು. ಜಿ.ಆರ್.ಗೋಪಾಲಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸಿ ಮುಂದಿನ ಡಿಸೆಂಬರ್ ನಲ್ಲಿ ವಯೋನಿವೃತ್ತಿ ಹೊಂದುತ್ತಿರುವ ASI ಮಂಜಪ್ಪ ರವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಇದೇ ಸಂಧರ್ಭದಲ್ಲಿ ಪುನೀತ್ ರಾಜ್‍ಕುಮಾರ್ ಭಾವಚಿತ್ರಕ್ಕೆ ಅತಿಥಿ ಗಣ್ಯರು ಹಾಗೂ ಕನ್ನಡಾಭಿಮಾನಿಗಳು ಪುಷ್ಪಾರ್ಚನೆ ಹಾಗೂ ಮೇಣದ ಬತ್ತಿ, ಮೊಬೈಲ್ ಟಾರ್ಚ್ ಬೆಳಕಿನ ಮೂಲಕ ಮೂಲಕ ನುಡಿನಮನ ಸಲ್ಲಿಸಿದರು.

ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷೆ ಧನಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬಿ ಪಿ ರಾಮಚಂದ್ರ ,ಬಿ ಜಿ ಚಂದ್ರಮೌಳಿ , ಎಂ ಎಂ ಪರಮೇಶ್ ,ಉಲ್ಲಾಸ್ ತೆಂಕೋಲ್, ಸಾಕಮ್ಮ , ಲೇಖನ ನಾಯ್ಕ್ , ಶ್ವೇತಾ ಆಚಾರ್ಯ ,ಸ್ವಾತಿ ವಾಸು ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.

ಪಿಯೂಸ್ ರೋಡ್ರಿಗಸ್ ಪ್ರಾರ್ಥಿಸಿದರು. ಹಸನಬ್ಬ ಸ್ವಾಗತಿಸಿದರು.ಶಿಕ್ಷಕಿ ಅಂಬಿಕಾ ಕಾರ್ಯಕ್ರಮ ನಿರೂಪಿಸಿದರು, ಶ್ರೀಧರ್  ವಂದಿಸಿದರು.

ಸಭಾ ಕಾರ್ಯಕ್ರಮದ ನಂತರ ಝೀ ಕನ್ನಡ ವಾಹಿನಿಯ ಸರಿಗಮಪ ಖ್ಯಾತಿಯ ದಿಯಾ ಹೆಗಡೆ ಮತ್ತು ನಾಗರಾಜ್ ತೊಂಬ್ರಿ, ಪ್ರಖ್ಯಾತ ಗಾಯನ ಕಲಾವಿದ ಮೆಹಬೂಬ್‌ಸಾಬ್, ಎದೆ ತುಂಬಿಹಾಡುವೆನು ಖ್ಯಾತಿಯ ಸಾನ್ವಿ ಜಿ.ಭಟ್ ಇವರಿಂದ ಗಾಯನ ಕಾರ್ಯಕ್ರಮ ಜರುಗಿತು.

Leave a Reply

Your email address will not be published. Required fields are marked *