RIPPONPETE | ಓಸಿ ದಂಧೆಯಲ್ಲಿ ತೊಡಗಿದ್ದ ಇಬ್ಬರು ಪೊಲೀಸರ ವಶಕ್ಕೆ
ರಿಪ್ಪನ್‌ಪೇಟೆ : ಪಟ್ಟಣದ ಕುಕ್ಕಳಲೆ ಬಸ್ ನಿಲ್ದಾಣದ ಬಳಿಯಲ್ಲಿ ಓ.ಸಿ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದ ಘಟನೆ ಗುರುವಾರ ರಾತ್ರಿ ನಡೆದಿದೆ.
ಪಟ್ಟಣದ ಸಾಗರ ರಸ್ತೆಯ ಕುಕ್ಕಳಲೆ ರಸ್ತೆಯಲ್ಲಿರುವ ಬಸ್ ನಿಲ್ದಾಣದ ಬಳಿಯಲ್ಲಿ ಇಬ್ಬರು ಅಸಾಮಿಗಳು ಒಂದು ರೂಪಾಯಿಗೆ 80 ರೂಪಾಯಿ ನೀಡುವುದಾಗಿ ಹೇಳಿ ಚೀಟಿಯನ್ನು ಬರೆದುಕೊಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯನ್ನಾಧರಿಸಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ಓ.ಸಿ ಬರೆದುಕೊಂಡು ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ಅವರ ಕೈಯಲ್ಲಿದ್ದ 1745 ರೂಪಾಯಿ ನಗದು ಓ.ಸಿ ಸಂಖ್ಯೆ ಬರೆದ ಚೀಟಿ ಮತ್ತು ಒಂದು ಪೆನ್ ಅನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ , ಸಂತೋಷ್ ಕೊರವರ , ಚನ್ನೇಶ್ , ಪರಮೇಶ್ವರ್ ಹಾಗೂ ಮಧುಸೂಧನ್ ಇದ್ದರು.