ಜಮೀನಿಗೆ ತೆರಳುವ ದಾರಿ ವಿಚಾರದಲ್ಲಿ ಗಲಾಟೆ – ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ

ಜಮೀನಿಗೆ ತೆರಳುವ ವಿಚಾರದಲ್ಲಿ ಗಲಾಟೆ – ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ

ಜಮೀನಿಗೆ ತೆರಳುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಯುವಕನೋರ್ವನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಯತ್ನ (Murder Attempt) ನಡೆಸಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗುಬ್ಬಿಗ (ಅಡ್ಡೆರಿ ) ಗ್ರಾಮದಲ್ಲಿ ನಡೆದಿದೆ.

ಅಡ್ಡೇರಿ ಗ್ರಾಮದ ಆದರ್ಶ(22)  ಎಂಬ ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ.ಈ ಗಲಾಟೆಯಲ್ಲಿ ಗಾಯಾಳು ಯುವಕನ ತಂದೆ ಬಸವರಾಜ್ ಹಾಗೂ ತಾಯಿ ಭವಾನಿ ರವರಿಗೂ ಗಾಯಗಳಾಗಿದ್ದು ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಆರೋಪಿಗಳಾದ ಅಡ್ಡೆರಿ ಗ್ರಾಮದ ಅಖಿಲೇಶ್ ಹಾಗೂ ಸಂದೇಶ್ ತಲೆಮರೆಸಿಕೊಂಡಿದ್ದು ಆರೋಪಿಗಳ ಪತ್ತೆ ಪೊಲೀಸರು ಬಲೆ ಬೀಸಿದ್ದಾರೆ.

ನಡೆದಿದ್ದೇನು..!!??

ದಿನಾಂಕ 22/11/2024 ರಂದು ಬೆಳಿಗ್ಗೆ ಅಡಿಕೆಯನ್ನು ತೋಟದಿಂದ ಗಾಯಾಳು ಆದರ್ಶ್ ತಂದೆ ಬಸವರಾಜ್ ಮತ್ತು ತಾಯಿ ಭವಾನಿ ಹೊರುತ್ತಿದ್ದಾಗ ಅಡ್ಡೇರಿ ಗ್ರಾಮದ ಮಂಜಪ್ಪರವರ ಮಗನಾದ ಸಂದೇಶನು ಬಂದವನೆ ಬಸವರಾಜ್ ರನ್ನು ಅಡ್ಡಗಟ್ಟಿ ತಡೆದು ನಿಲಿಸಿ ನೀವು ಈ ದಾರಿಯಲ್ಲಿ ಓಡಾಡುವಂತಿಲ್ಲ. ಈ ದಾರಿ ನಮಗೆ ಸೇರಿದ್ದು ಎಂದು ಹೇಳಿದ್ದು  ಅವರ ದೊಡ್ಡಪ್ಪನ ಮಗನಾದ ಅಖಿಲೇಶ್ ಗೆ ಫೋನ್ ಮಾಡಿ ಕರೆಯಿಸಿದ್ದಾನೆ. ಸ್ಥಳಕ್ಕೆ ಬಂದ ಅಖಿಲೇಶ್ ಅವಾಚ್ಯ ಪದಗಳಿಂದ ಬೈಯುತ್ತಾ ಇಲ್ಲಿ ನೀವು ಯಾರು ಓಡಾಡಬಾರದು, ಇದು ನಮಗೆ ಸೇರಿದ ದಾರಿ ಎಂದು ಗಲಾಟೆ ಮಾಡಿದನು, ಆಗ ಬಸವರಾಜ್ ಈ ದಾರಿ ನಮಗೂ ಸೇರಿದ್ದು ಎಂದು ಹೇಳುತಿದ್ದಂತೆಯೇ, ಅಖಿಲೇಶನು ಬಸವರಾಜ್ ನ್ನು ಹಿಡಿದು ದೂಡಿ ಕೆಡವಿದ್ದಾನೆ.

ಆದರ್ಶ್ ಅವರ ತಾಯಿಯವರು ಬಸವರಾಜ್  ಎತ್ತಲು ಹೋದಾಗ, ಅಖಿಲೇಶನು ಸಂದೇಶನ ಕೈಯಲಿದ್ದ ಕತ್ತಿಯನ್ನು ಕಸಿದುಕೊಂಡು ಕೊಲೆ ಮಾಡುವ ಉದ್ದೇಶದಿಂದ ಕತ್ತಿಯಿಂದ ಆದರ್ಶನ ಕುತ್ತಿಗೆಗೆ ಹೊಡೆಯಲು ಬೀಸಿದಾಗ ಆದರ್ಶನು ತಪ್ಪಿಸಿಕೊಂಡಾಗ ಕತ್ತಿಯ ಏಟು ಬಲಭಾಗದ ಭುಜಕ್ಕೆ, ಬಿದ್ದು ಗಾಯವಾಗಿ ರಕ್ತ ಸುರಿಯುತಿದ್ದಾಗ, ಬಿಡಿಸಲು ಬಂದ ತಾಯಿಯ ಮೇಲೂ ಹಲ್ಲೆಗೈದಿದ್ದಾರೆ.

ನಂತರದಲ್ಲಿ ಅವಾಚ್ಯ ಪದಗಳಿಂದ ಬೈಯುತ್ತಾ ನೀವು ಮತ್ತೆ ಈ ದಾರಿಯಲಿ ಓಡಾಡಲು ಬಂದರೆ ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಕೊಲೆಮಾಡುತ್ತೇವೆ ಎಂದು ಬೆಧರಿಕೆ ಹಾಕಿ ಹೋಗಿದ್ದಾರೆ.

ಗಾಯಾಳುಗಳು ಕೂಡಲೇ ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ತೆರಳಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿದ್ದರು.

ಈ ಬಗ್ಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಹಾಗೂ ಜೀವ ಬೆದರಿಕೆ ಒಡ್ಡಿರುವ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

3 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

8 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

10 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago