ಆಸ್ತಿ ವಿಚಾರದ ಗಲಾಟೆ ವಿಕೋಪಕ್ಕೆ : ಕುಡುಗೋಲಿನಿಂದ ಚುಚ್ಚಿ ಮಗನ ಕೊಲೆಗೈದ ತಂದೆ
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಶುಕ್ರವಾರ ತಂದೆ ಮತ್ತು ಮಗನ ನಡುವೆ ಜಗಳ ನಡೆದು ಮಗನ ಕೊಲೆಯಲ್ಲಿ ಅಂತ್ಯವಾಗಿದೆ.
ಗಂಗಾನಾಯ್ಕ್(36) ಕೊಲೆಯಾದ ವ್ಯಕ್ತಿ. ಆತನ ತಂದೆ ಲಿಂಗಾನಾಯ್ಕ್ ಜೊತೆಗೆ ಆಸ್ತಿ ವಿಚಾರಕ್ಕೆ ಗಲಾಟೆಯಾಗಿದೆ.
ಜಗಳ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಲಿಂಗಾನಾಯ್ಕ್ ಕುಡಗೋಲಿನಿಂದ ಮಗನ ಎದೆ ಭಾಗಕ್ಕೆ ಚುಚ್ಚಿದ್ದು, ತೀವ್ರ ರಕ್ತಸ್ರಾವದಿಂದ ಗಂಗಾನಾಯ್ಕ್ ಮೃತಪಟ್ಟಿದ್ದಾನೆ.
ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿಡಿವೈಎಸ್ಪಿ ಕೇಶವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.