Headlines

RIPPONPETE | ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ

GridArt 20241216 171308290.jpg

RIPPONPETE | ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ

ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜ್ ನ ವಿದ್ಯಾರ್ಥಿಗಳು ಶಿವಮೊಗ್ಗ ದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಾಂಸ್ಕೃತಿಕ  ಸ್ಪರ್ಧೆ ಕಾರ್ಯಕ್ರಮದಲ್ಲಿ ಬಾಗವಹಿಸಿ  ಭಾವ ಗೀತೆ ಹಾಗೂ ಜನಪದ ಗೀತೆಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ  ಪ್ರಣತಿ ಅಣ್ಣಪ್ಪ ಭಾವಗೀತೆಯಲ್ಲಿ ಪ್ರಥಮ ಸ್ಥಾನ. ಹಾಗೂ ಪ್ರಥಮ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಅರ್ಜುನ್.ಎಸ್.  ಜಾನಪದ ಗೀತೆಯಲ್ಲಿ ಜಿಲ್ಲಾ ಮಟ್ಟದಲ್ಲಿ  ಪ್ರಥಮ ಸ್ಥಾನ ಪಡೆದುಕೊಳ್ಳುವುದರ ಮೂಲಕ   ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನವನ್ನು ಪಡೆದುಕೊಳ್ಳುವುದರ ಮೂಲಕ  ಕಾಲೇಜಿಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಚಾರ್ಯರಾದ ವಾಸುದೇವ್ , ಕೆ. ವಿ. ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ  ಜಿ ಆರ್ ಗೋಪಾಲಕೃಷ್ಣ, ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರುಗಳು. ಉಪನ್ಯಾಸಕರು ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಥರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *