ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ
ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡಗದ್ದೆ ಬಳಿ ನಡೆದಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತಿದ್ದ ಮಾರುತಿ ಆಲ್ಟೊ ಕಾರು ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಹೋಗುತಿದ್ದ ಟಿವಿಎಸ್ ಅಪ್ಪಚ್ಚಿ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಬೈಕ್ ನಲ್ಲಿದ್ದ ಇಬ್ಬರು ಪ್ರಯಾಣಿಕರಿದ್ದು ಒಬ್ಬರ ಕಾಲು ಮುರಿತವಾಗಿದ್ದರೆ ಇನ್ನೊಬ್ಬರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದ್ದು ಇಬ್ಬರನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಆಲ್ಟೊ ಕಾರು ತೀರ್ಥಹಳ್ಳಿಯ ಕುರುವಳ್ಳಿಯದ್ದು ಎಂದು ಹೇಳಲಾಗಿದೆ. ಕಾರಿನ ಮುಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದೆ.
ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.