POSTMANNEWS

ನೈಜ ಸುದ್ದಿ ನೇರ ಬಿತ್ತರ..

ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದ ಲಾರಿ – ತಪ್ಪಿದ ಭಾರಿ ಅನಾಹುತ

ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದ ಲಾರಿ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಗೊಬ್ಬರದ ಲಾರಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದಲ್ಲಿ ಹಾದುಹೋದ ರಾಷ್ಟ್ರೀಯ ಹೆದ್ದಾರಿ 766 ಸಿ ಶಿವಮೊಗ್ಗ ರಸ್ತೆಯ ಶ್ರೀ ಗುರುಶಕ್ತಿ ಆಟೋಮೊಬೈಲ್ಸ್ ಬಳಿ ಹಾನಗಲ್ಲಿನ ಲಾರಿಯೊಂದು ಮಂಗಳೂರಿನಿಂದ ಸೊರಬಕ್ಕೆ ಗೊಬ್ಬರ ತುಂಬಿಕೊಂಡು ತೆರಳುತ್ತಿರುವಾಗ ಸೋಮವಾರ ಬೆಳಗಿನ ಜಾವ 3:00 ರ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ರಸ್ತೆಗೆ ಮಗುಚಿ ಬಿದ್ದ ಪರಿಣಾಮ ಕೆಲಕಾಲ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು.

ಅಪಘಾತ ನಡೆದ ಸಂದರ್ಭದಲ್ಲಿ ವಿದ್ಯುತ್ ಸಂಪರ್ಕ ಕಡಿದು ಬಾರಿ ಶಬ್ದ ಉಂಟಾದ ಕಾರಣ ಅಕ್ಕ ಪಕ್ಕದ ಮನೆಯವರು ಧಾವಿಸಿ ಲಾರಿ ಒಳಗೆ ಸಿಲುಕಿಕೊಂಡಿದ್ದ ಚಾಲಕನನ್ನು ರಕ್ಷಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಜೀವಹಾನಿಯಾಗಿಲ್ಲ.

ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

About The Author

Leave a Reply

Your email address will not be published. Required fields are marked *

Exit mobile version