POSTMAN NEWS

ನೈಜ ಸುದ್ದಿ ನೇರ ಬಿತ್ತರ..

ತಾರಕಕ್ಕೇರಿದ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು

Screenshot 20241211 110012 Chrome.jpg

ತಾರಕಕ್ಕೇರಿದ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು

ಶಿಕಾರಿಪುರ : ಅನೈತಿಕ ಸಂಬಂಧದ ವಿಚಾರಕ್ಕೆ ರಾತ್ರಿ ಇಡೀ ನಡೆದ ಜಗಳ ತಾರಕಕ್ಕೇರಿ ಪತಿ ಕಂದಲಿಯಿಂದ ಕೊಚ್ಚಿ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಳ್ಳಂಬೆಳಿಗ್ಗೆ ಶಿಕಾರಿಪುರ ಟೌನ್ ರಾಘವೇಂದ್ರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು ರೇಣುಕಾ (40) ಕೊಲೆಯಾದ ದುರ್ದೈವಿ. ಈಕೆಯನ್ನು ಪತಿ ನಾಗರಾಜ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.

ದಂಪತಿ ನಡುವೆ ರಾತ್ರಿ ಇಡೀ ಜಗಳ ನಡೆದಿದ್ದು, ಬೆಳಗಿನಜಾವ ನಾಲ್ಕು ಗಂಟೆ ಸುಮಾರಿಗೆ ನಾಗರಾಜ ತನ್ನ ಪತ್ನಿ ರೇಣುಕಾಳನ್ನು ಕಂದಲಿಯಿಂದ ಕೊಚ್ಚಿ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ನಾಗರಾಜ್ ಪ್ಯಾಸೆಂಜರ್ ಆಟೋ ಓಡಿಸಿ ಜೀವನ ನಿರ್ವಹಣೆ ಮಾಡುತ್ತಿದ್ದರು ಎನ್ನಲಾಗಿದೆ.

ಮೃತ ರೇಣುಕಾಳ ಶವ ಮನೆ ಮುಂಭಾಗದಲ್ಲಿ ಪತ್ತೆಯಾಗಿದ್ದು, ಆರೋಪಿ ನಾಗರಾಜನನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಎಸ್‌ಪಿ ಮಿಥುನ್‌ ಕುಮಾರ್‌ ವಾಟ್ಸಾಪ್‌ ಮೂಲಕ ಮಾಹಿತಿ ರವಾನೆ ಮಾಡಿದ್ದು, ಶಿಕಾರಿಪುರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಒಂದು ಕೊಲೆ ನಡೆದಿದೆ. 45 ವರ್ಷದ ನಾಗರಾಜ್‌ ಎಂಬಾತ ತನ್ನ ಪತ್ನಿಯನ್ನ ಕೊಲೆ ಮಾಡಿದ್ದಾನೆ. ಆತನನ್ನ ಬಂಧಿಸಲಾಗಿದ್ದು ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ. ವೈವಾಹಿಕ ಸಮಸ್ಯೆ ಹಿನ್ನೆಲೆಯಲ್ಲಿ ಆತ ಈ ಕೃತ್ಯವೆಸಗಿರುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.